ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು

Update: 2017-06-20 14:47 GMT

ಮೂಡುಬಿದಿರೆ,ಜೂ.20 : ತೋಡಾರಿನ ಖಾಸಗಿ ಇಂಜಿನಿಯರಿಂಗ್ ಕಾಲೇಜಿನ ಅಂತಿಮ ವರ್ಷದ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿ ಸಚಿನ್ ಡಿ. (24) ಮಂಗಳವಾರ ಹೃಯಾಘಾತದಿಂದ ಮೃತಪಟ್ಟಿದ್ದಾರೆ.

ಇವರು ಉಪ್ಪಿನಂಗಡಿ ನೆಕ್ಕಿಲಾಡಿಯ ನಿವೃತ್ತ ಬಿಎಸ್‌ಎನ್‌ಎಲ್ ಉದ್ಯೋಗಿ ಕುಂಞಣ್ಣ ನಾಯ್ಕೋ ಎಂಬವರ ಪುತ್ರ. ಮಂಗಳವಾರ ಬೆಳಿಗ್ಗೆ ಎಂದಿನಂತೆ ಹಾಸ್ಟೆಲ್ ಕೊಠಡಿಯಲ್ಲಿ ಸಹಪಾಠಿಗಳೊಂದಿಗೆ ಅಧ್ಯಯನ ನಡೆಸುತ್ತಿದ್ದಾಗ ಎದೆನೋವು ಕಾಣಿಸಿಕೊಂಡಿತು.

ಹಾಸ್ಟೆಲ್ ವಾರ್ಡನ್ ಹಾಗೂ ಸಹಪಾಠಿಗಳು ಕೂಡಲೇ ಮೂಡುಬಿದಿರೆ ಆಳ್ವಾಸ್ ಆಸ್ಪತ್ರೆಗೆ ಕರೆತರುವ ವೇಳೆ ಮೃತಪಟ್ಟಿದ್ದರು. ಸಚಿನ್ ಕಲಿಕೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದರು ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News