ಜೂ.21: ಗಾಂಧಿ ಅಧ್ಯಯನ ಕೇಂದ್ರ ಲೋಕಾರ್ಪಣೆ

Update: 2017-06-20 15:00 GMT

ಬೆಂಗಳೂರು, ಜೂ.20: ಶೇಷಾದ್ರಿಪುರಂ ಪದವಿ ಪೂರ್ವ ಕಾಲೇಜಿನ ರಜತ ಮಹೋತ್ಸವ ಅಂಗವಾಗಿ ಯಲಹಂಕದಲ್ಲಿನ ಕಾಲೇಜು ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಗಾಂಧಿ ಅಧ್ಯಯನ ಕೇಂದ್ರವನ್ನು ಜೂ.21 ರಂದು ಸಾಮಾಜಿಕ ಕಾರ್ಯಕರ್ತ ಡಾ.ಅಣ್ಣಾ ಹಜಾರೆ ಉದ್ಘಾಟಿಸಲಿದ್ದಾರೆ.

ಮಂಗಳವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ.ಟಿ.ದೊಡ್ಡೇಗೌಡ ಮಾತನಾಡಿ, ರಜತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಅಣ್ಣ ಹಜಾರೆ ಕಾಲೇಜಿನ ವಿದ್ಯಾರ್ಥಿಗಳಿಗೆ ಸಸಿಗಳನ್ನು ವಿತರಿಸಲಿದ್ದಾರೆ ಎಂದು ತಿಳಿಸಿದರು.

ಈ ವೇಳೆ ಶೇಷಾದ್ರಿಪುರಂ ಶಿಕ್ಷಣ ಸಂಘದ ಅಧ್ಯಕ್ಷ ಎನ್.ಆರ್.ಪಂಡಿತಾರಾಧ್ಯ ಹಾಗೂ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ಡಾ.ವೂಡೆ.ಪಿ.ಕೃಷ್ಣ ಸೇರಿದಂತೆ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News