ಜೂ.23: ರಾಜ್ಯಮಟ್ಟದ ವಿಚಾರ ಸಂಕಿರಣ
Update: 2017-06-20 20:33 IST
ಬೆಂಗಳೂರು, ಜೂ.20: ನೋಟು ಅಮಾನ್ಯೀಕರಣದಿಂದ ಸಹಕಾರ ಸಂಘಗಳ ಮೇಲೆ ಉಂಟಾದ ಪರಿಣಾಮ, ಸಹಕಾರ ಚಳವಳಿ ಮತ್ತು ಸರಕಾರಿ ನೌಕರರ ಕುರಿತಂತೆ ರಾಜ್ಯ ಮಟ್ಟದ ವಿಚಾರ ಸಂಕಿರಣವನ್ನು ಜೂ. 23ರಂದು ವಿಧಾನಸೌಧ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಲಾಗಿದೆ ಎಂದು ಸರಕಾರದ ಸಚಿವಾಲಯ ಸಹಕಾರ ಸಂಘಗಳ ಅಧ್ಯಕ್ಷ ಯು.ಡಿ.ನರಸಿಂಹಯ್ಯ ತಿಳಿಸಿದ್ದಾರೆ.
ನಗರದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಚಾರ ಸಂಕಿರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಈ ವೇಳೆ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ವಿಧಾನಸಭಾ ಸದಸ್ಯ ಎಸ್.ಟಿ.ಸೋಮಶೇಖರ್, ಸರಕಾರಿ ನೌಕರರ ಸಂಘದ ಅಧ್ಯಕ್ಷ ಬಿ.ಪಿ. ಮಂಜೇಗೌಡ ಸೇರಿದಂತೆ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.