ವಿಧಾನ ಪರಿಷತ್‌ನಲ್ಲಿ ಬಿಜೆಪಿ ಸದಸ್ಯರಿಂದ ಸಭಾತ್ಯಾಗ

Update: 2017-06-20 15:27 GMT

ಬೆಂಗಳೂರು, ಜೂ. 20: ರಾಜ್ಯ ಸರಕಾರ ಬರ ನಿರ್ವಹಣೆ ಮಾಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಹಾಗೂ ರೈತರ ಸಾಲ ಮನ್ನಾ ಮಾಡಲೂ ಹಿಂದೇಟು ಹಾಕುತ್ತಿದೆ ಎಂದು ಆರೋಪಿಸಿದ ಬಿಜೆಪಿಯ ಪರಿಷತ್ ಸದಸ್ಯರು ಸಭಾತ್ಯಾಗ ಮಾಡಿ ಹೊರ ನಡೆದರು.
        
ನಿಯಮ 68ರ ಮೇರೆಗೆ ಸಾರ್ವಜನಿಕ ಮಹತ್ವದ ವಿಷಯದ ಅಡಿಯಲ್ಲಿ ಮಾತನಾಡಿದ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ, ರಾಜ್ಯದಲ್ಲಿ ಎರಡ್ಮೂರು ವರ್ಷಗಳಿಂದ ಭೀಕರ ಬರಗಾಲವಿದ್ದು, ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ, ಸಹಕಾರ ಸಂಘಗಳಲ್ಲಿ ರೈತರು ಮಾಡಿರುವ ಸಾಲವನ್ನು ಮನ್ನಾ ಮಾಡಬೇಕೆಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ಹೇಳಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಕಾಗೋಡು ತಿಮ್ಮಪ್ಪ ಅವರು ಈ ವಿಚಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತರುತ್ತೇನೆ ಎಂದು ಹೇಳಿದರು.
          

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News