ಜಂತಕಲ್ ಮೈನಿಂಗ್ ಪ್ರಕರಣ ಅರ್ಜಿ ವಿಚಾರಣೆ ಜೂನ್ 28ಕ್ಕೆ ಮುಂದೂಡಿದ ಹೈಕೋರ್ಟ್

Update: 2017-06-20 15:34 GMT

ಬೆಂಗಳೂರು, ಜೂ.20: ಜಂತಕಲ್ ಮೈನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್.ಡಿ. ಕುಮಾರಸ್ವಾಮಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜೂನ್ 28ಕ್ಕೆ ಮುಂದೂಡಿದೆ. ನ್ಯಾಯಮೂರ್ತಿ ರತ್ನಕಲಾ ಅವರ ಪೀಠದಿಂದ ವಿಚಾರಣೆ ನಡೆಯಿತು.

ಈ ವೇಳೆ ಎಚ್.ಡಿ.ಕುಮಾರಸ್ವಾಮಿ ಪರ ವಕೀಲರು, ಜಂತಕಲ್ ಮೈನಿಂಗ್ ಮಾಲಕರು ನಕಲಿ ದಾಖಲೆ ಸೃಷ್ಟಿಸಿದ್ದಾರೆ. ಅಕ್ರಮದ ಬಗ್ಗೆ ಎಚ್.ಡಿ.ಕುಮಾರಸ್ವಾಮಿಗೆ ಯಾವುದೇ ಮಾಹಿತಿ ಇಲ್ಲ. ಇದೇ ಪ್ರಕರಣದ ತನಿಖೆಯನ್ನ ಈಗಾಗಲೇ ಹೈಕೋರ್ಟ್ ರದ್ದುಗೊಳಿಸಿ ಆದೇಶ ನೀಡಿತ್ತು. ಒಂದೇ ಅಪರಾಧದಲ್ಲಿ ಎರಡು ಎಫ್‌ಐಆರ್ ದಾಖಲಿಸಲು ಸಾಧ್ಯವಿಲ್ಲ. ಎಸ್‌ಐಟಿ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಎರಡು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ವಾದ ಮಂಡಿಸಿದರು.

ಕುಮಾರಸ್ವಾಮಿ ಈಗಾಗಲೇ ವಿಚಾರಣೆಗೆ ಹಾಜರಾಗಿದ್ದಾರೆ. ಎಸ್‌ಐಟಿ ಅಧಿಕಾರಿಗಳ ತನಿಖೆಗೆ ಕುಮಾರಸ್ವಾಮಿ ಸಹಕರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಜಾಮೀನು ಮಂಜೂರು ಮಾಡುವಂತೆ ಎಚ್‌ಡಿಕೆ ಪರ ವಕೀಲರು ಮನವಿ ಮಾಡಿದರು. ಬಳಿಕ ನ್ಯಾಯಾಧೀಶರು ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಜೂನ್ 28ಕ್ಕೆ ಮುಂದೂಡಿದರು. ಅಲ್ಲದೇ ತನಿಖೆಗೆ ಅಗತ್ಯವಿದ್ದಲ್ಲಿ ಆರೋಪಿ ತನಿಖಾಧಿಕಾರಿ ಮುಂದೆ ಹಾಜರಾಗುವಂತೆ ನ್ಯಾ. ರತ್ನಕಲಾ ಅವರಿದ್ದ ಹೈಕೋರ್ಟ್ ಏಕ ಸದಸ್ಯ ಪೀಠ ಸೂಚಿಸಿತು.

   

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News