ಆಳ್ವಾಸ್‌ನಲ್ಲಿ ಯೋಗ ದಿನಾಚರಣೆ

Update: 2017-06-21 08:17 GMT

ಮೂಡುಬಿದಿರೆ, ಜೂ.21: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ನ್ಯಾಚುರೋಪಥಿ ಹಾಗೂ ಯೋಗಿಕ್ ಸೈನ್ಸ್ ಕಾಲೇಜಿನ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಪುತ್ತಿಗೆ ಪದವಿನಲ್ಲಿರುವ ಆಳ್ವಾಸ್ ಆಂಗ್ಲ ಮಾಧ್ಯಮ ಶಾಲೆಯ ಅವರಣದಲ್ಲಿಂದು ಹಮ್ಮಿಕೊಳ್ಳಲಾಯಿತು.

ಹಿರಿಯ ವಿಜ್ಞಾನಿ ಡಾ.ರಾಘವೇಂದ್ರ ಯೋಗ ದಿನಾಚರಣೆಯನ್ನು ಉದ್ಘಾಟಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ದೇಶ-ವಿದೇಶ ವಿದ್ಯಾರ್ಥಿಗಳಿರುವ ಆಳ್ವಾಸ್ ಸಂಸ್ಥೆಯಲ್ಲಿ ನಿಜಾರ್ಥದಲ್ಲಿ ವಿಶ್ವಯೋಗ ದಿನಾಚರಣೆಯಾಗುತ್ತಿದೆ ಎಂದರು.

ಆನಾಮಿಕ ರಘುವಂಶ್, ಶ್ವೇತಾ ನಾರಾಯಣ್ ನಿರ್ದೇಶನದಲ್ಲಿ 1 ಸಾವಿರಕ್ಕೂ ಅಧಿಕ ಮಂದಿ 25 ಮಿಕ್ಕಿದ ಆಸನಗಳನ್ನು ಪ್ರದರ್ಶಿಸಿದರು. ಆಳ್ವಾಸ್ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಯತಿಕುಮಾರ್ ಸ್ವಾಮಿ ಗೌಡ, ಆಳ್ವಾಸ್ ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಡಾ.ವಿನಯಚಂದ್ರ ಶೆಟ್ಟಿ, ಆಳ್ವಾಸ್ ಬಿಎನ್‌ವೈಎಸ್ ಕಾಲೇಜಿನ ಪ್ರಾಂಶುಪಾಲೆ ಡಾ.ವನಿತಾ ಶೆಟ್ಟಿ, ಆಳ್ವಾಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯಶಿಕ್ಷಕ ವಸಂತ ಕುಮಾರ್ ನಿಟ್ಟೆ, ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ಪ್ರಶಾಂತ್, ಆಳ್ವಾಸ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಉಮಾ ರುಪೂಸ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News