ಅಶ್ರಫ್ ಕಲಾಯಿ ಹತ್ಯೆ: ಜಮಾಅತೆ ಇಸ್ಲಾಮೀ ಹಿಂದ್ ಖಂಡನೆ
Update: 2017-06-21 16:52 IST
ಮಂಗಳೂರು, ಜೂ.21: ಎಸ್.ಡಿ.ಪಿ.ಐ. ವಲಯಾಧ್ಯಕ್ಷ ಅಶ್ರಫ್ ಕಲಾಯಿಯವರ ಹತ್ಯೆಯನ್ನು ಜಮಾಅತೆ ಇಸ್ಲಾಮೀ ಹಿಂದ್ ತೀವ್ರವಾಗಿ ಖಂಡಿಸುತ್ತದೆ.
ದ.ಕ. ಜಿಲ್ಲೆಯಲ್ಲಿ ಈಗಾಗಲೇ ಅಭದ್ರತೆಯ ವಾತಾವರಣವಿದ್ದು, ಈ ಘಟನೆಯು ಜಿಲ್ಲೆ ಯನ್ನು ಇನ್ನಷ್ಟು ಆತಂಕಕ್ಕೆ ದೂಡುವ ಸಾಧ್ಯತೆಯಿದೆ. ಆದ್ದರಿಂದ ಪೊಲೀಸ್ ಇಲಾಖೆಯು ಅತೀ ಶೀಘ್ರವಾಗಿ ಹಂತಕರನ್ನು ಪತ್ತೆ ಹಚ್ಚುವ ಮೂಲಕ ಇನ್ನಷ್ಟು ಅನಾಹುತವಾಗದಂತೆ ನೋಡಿಕೊಳ್ಳಬೇಕಿದೆ.
ಇನ್ನು ಕೆಲವೇ ದಿನಗಳಲ್ಲಿ ಈದ್ ಆಚರಿಸಲು ಮುಸ್ಲಿಮರು ಸಿದ್ಧವಾಗುತ್ತಿರುವ ಈ ಸಂದರ್ಭದಲ್ಲಿ ನಡೆದಿರುವ ಈ ಹತ್ಯೆಯು ಮುಸ್ಲಿಮರಲ್ಲಿ ಸಹಜವಾಗಿಯೇ ಆತಂಕವನ್ನು ಹುಟ್ಟು ಹಾಕಿದೆ. ಈ ಹಿನ್ನೆಲೆಯಲ್ಲಿ ಸರಕಾರ ಮತ್ತು ಜಿಲ್ಲಾ ಡಳಿತವು ಸೂಕ್ತ ಕ್ರಮ ಕೈಗೊಂಡು ಶಾಂತಿ ಕಾಪಾಡಬೇಕು ಮತ್ತು ಮೃತ ಅಶ್ರಫ್ ಕುಟುಂಬಕ್ಕೆ ಪರಿಹಾರ ಧನ ಒದಗಿಸಬೇಕೆಂದು ಜಮಾಅತೆ ಇಸ್ಲಾಮೀ ಹಿಂದ್ ಮಂಗಳೂರು ಅಧ್ಯಕ್ಷ ಮುಹಮ್ಮದ್ ಕುಂಞ ಒತ್ತಾಯಿಸಿದ್ದಾರೆ.