ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

Update: 2017-06-21 13:17 GMT

ಮೂಡಿಗೆರೆ, ಜೂ. 21: ಕಾಲೇಜಿನ ವಿದ್ಯಾರ್ಥಿನಿಯೋರ್ವಳು ಮನೆಯಲ್ಲಿ ನೇಣು ಬಿಗಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಗುತ್ತಿ ಗ್ರಾಮದಲ್ಲಿ ನಡೆದಿದೆ.

ಗುತ್ತಿ ಗ್ರಾಮದ ಮಾನವಿ (21) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ.

ಮೂಡಿಗೆರೆ ಕಾಲೇಜಿನಲ್ಲಿ ಅಂತಿಮ ಬಿ.ಎ. ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಮಾನವಿ ಅಂತಿಮ ಪರೀಕ್ಷೆಯಲ್ಲಿ ಅನುತ್ತೀರ್ಣಳಾಗಿದ್ದು, ನಂತರ ಎರಡನೇ ಬಾರಿ ಪರೀಕ್ಷೆ ಬರೆದಿದ್ದು ಫಲಿತಾಂಶ ಎಲ್ಲಿ ಅನುತ್ತೀರ್ಣವಾಗುತ್ತದೋ ಎಂಬ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News