ಎಡಿಜಿಪಿ ನೇತೃತ್ವದಲ್ಲಿ ತನಿಖೆ, ಕಾರ್ಯಾಚರಣೆ: ಯು.ಟಿ. ಖಾದರ್
Update: 2017-06-21 20:36 IST
ಮಂಗಳೂರು, ಜೂ. 21: ಅಮ್ಮುಂಜೆ ಮುಹಮ್ಮದ್ ಅಶ್ರಫ್ ಅವರನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಲೆ ಮಾಡಿರುವ ಘಟನೆಯನ್ನು ಆಹಾರ ಸಚಿವ ಯು.ಟಿ. ಖಾದರ್ ತೀವ್ರವಾಗಿ ಖಂಡಿಸಿದ್ದಾರೆ.
ಈ ಘಟನೆಯನ್ನು ರಾಜ್ಯ ಸರಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ ಎಂದು ಹೇಳಿರುವ ಖಾದರ್, ನೈಜ ಆರೋಪಿಗಳನ್ನು ಅತ್ಯಂತ ಶೀಘ್ರವಾಗಿ ಬಂಧಿಸಲಾಗುವುದು ಎಂದು ಹೇಳಿದ್ದಾರೆ.
ರಾಜ್ಯ ಅಪರ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಅವರು ಮಂಗಳೂರಿನಲ್ಲಿ ಮೊಕ್ಕಾಂ ಹೂಡಿ, ಕೊಲೆ ಆರೋಪಿಗಳ ಪತ್ತೆ ಹಾಗು ಬಂಧನ ಕಾರ್ಯಾಚರಣೆಗೆ ನೇತೃತ್ವ ವಹಿಸಲಿದ್ದಾರೆ. ಜಿಲ್ಲೆಯ ಜನರು ಈ ಸಂದರ್ಭದಲ್ಲಿ ಶಾಂತಿ ಕಾಪಾಡಿ, ಗಲಭೆ ಸೃಷ್ಟಿಸುವ ಮೂಲಕ ತನಿಖೆಯ ದಿಕ್ಕು ತಪ್ಪಿಸಲು ಯತ್ನಿಸುವ ದುಷ್ಟ ಶಕ್ತಿಗಳ ಸಂಚನ್ನು ಸೋಲಿಸಬೇಕು ಹಾಗು ಪೊಲೀಸ್ ಇಲಾಖೆಗೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಅವರು ವಿನಂತಿಸಿದ್ದಾರೆ.