ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
ಮಂಗಳೂರು, ಜೂ.21: ಮಂಗಳೂರು ವಿಶ್ವವಿದ್ಯಾಲಯದ ಘಟಕ ಕಾಲೇಜುಗಳಾದ ವಿಶ್ವವಿದ್ಯಾನಿಲಯ ಕಾಲೇಜು, ವಿಶ್ವವಿದ್ಯಾಲಯ ಸಂದ್ಯಾ ಕಾಲೇಜು ಮಂಗಳೂರು, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಮಡಿಕೇರಿ ಹಾಗೂ ವಿಶ್ವವಿದ್ಯಾಲಯ ಪ್ರಥಮ ದರ್ಜೆ ಕಾಲೇಜು ಮಂಗಳಗಂಗೋತ್ರಿ ಇಲ್ಲಿಯ 2017-18ನೇ ಸಾಲಿಗೆ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಅಂಗೀಕೃತ ವಿವಿಯಿಂದ ಸ್ನಾತಕೋತ್ತರ ಪದವಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ವಿಶ್ವವಿದ್ಯಾಲಯದ ವೆಬ್‌ಸೈಟ್‌ನಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಜೂನ್ 24ರೊಳಗೆ ಸಲ್ಲಿಸುವುದು. ಅಭ್ಯರ್ಥಿಗಳು ಅರ್ಜಿಯ ಒಂದು ಪ್ರತಿ ಮತ್ತು ದಾಖಲೆಗಳ ಜೆರಾಕ್ಸ್ ಹಾಗೂ ಮೂಲ ದಾಖಲಾತಿಗಳೊಂದಿಗೆ ಜೂನ್ 27 ಮತ್ತು 28ರಂದು ಮಂಗಳೂರು ವಿವಿ ಆಡಳಿತ ಸೌಧದಲಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಯುಜಿಸಿ.ಎನ್‌ಇಟಿ, ಎಸ್‌ಎಲ್‌ಇಟಿ ಉತ್ತೀರ್ಣತೆ, ಪಿಎಚ್‌ಡಿ ಎಂಫಿಲ್ ಪಡೆದವರಿಗೆ ಆಧ್ಯತೆ ನೀಡಲಾಗುವುದೆಂದು ವಿವಿಯ ಪ್ರಕಟನೆ ತಿಳಿಸಿದೆ.
ಜೂನ್ 27ರಂದು ಗಣಿತಶಾಸ್ತ್ರ, ಭೌತಶಾಸ್ತ್ರ, ಗಣಕ ವಿಜ್ಞಾನ, ರಸಾಯಶಾಸ್ತ್ರ, ಯೋಗವಿಜ್ಞಾನ, ಪ್ರಾಣಿಶಾಸ್ತ್ರ, ಸಸ್ಯಶಾಸ್ತ್ರ, ಭೂಗೋಳಶಾಸ್ತ್ರ, ಸಮಾಜಶಾಸ್ತ್ರ, ರಾಜ್ಯಶಾಸ್ತ್ರ, ಜರ್ನಲಿಸಂ, ಸಮಾಜಕಾರ್ಯ, ದೈಹಿಕ ಶಿಕ್ಷಣ, ಭರತನಾಟ್ಯಂ, ಕೌನ್ಸಲರ್, ಜೂನ್ 28ರಂದು ಪ್ರವಾಸೋದ್ಯಮ ಆಡಳಿತ, ವಾಣಿಜ್ಯಶಾಸ್ತ್ರ ಮತ್ತು ಮ್ಯಾನೇಜ್‌ಮೆಂಟ್, ಕನ್ನಡ, ಇಂಗ್ಲೀಷ್, ಹಿಂದಿ, ಪ್ರೆಂಚ್, ಜರ್ಮನಿ, ಕೊಂಕನ್, ಅರ್ಥಶಾಸ್ತ್ರ ವಿಷಯದಲ್ಲಿ ಸಂದರ್ಶನ ನಡೆಯಲಿದೆ.