ದ.ಕ.: ಸೆ.144 ವಿಸ್ತರಣೆ
Update: 2017-06-21 22:17 IST
ಮಂಗಳೂರು, ಜೂ. 21: ಬಂಟ್ವಾಳ ತಾಲೂಕಿನ ಬೆಂಜನಪದವಿನಲ್ಲಿ ಅಶ್ರಫ್ ಎಂಬವರನ್ನು ದುಷ್ಕರ್ಮಿಗಳು ಹತ್ಯೆ ನಡೆಸಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲಿ (ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿ ಹೊರತುಪಡಿಸಿ) ಜೂ. 21ರವರೆಗೆ ವಿಧಿಸಿರುವ 144 ಸೆಕ್ಷನ್‌ನ್ನು ವಿಸ್ತರಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಜೂ.21ರ ಮಧ್ಯರಾತ್ರಿ 12 ಗಂಟೆಯಿಂದ ಜೂ.27ರ ಮಧ್ಯರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆಯನ್ನು ವಿಸ್ತರಿಸಿ ಜಿಲ್ಲಾಧಿಕಾರಿ ಡಾ.ಕೆ.ಜಿ.ಜಗದೀಶ್ ಆದೇಶ ಹೊರಡಿಸಿದ್ದಾರೆ.