ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲೂ 144 ಸೆಕ್ಷನ್
Update: 2017-06-22 13:30 IST
ಮಂಗಳೂರು, ಜೂ. 22: ಬಂಟ್ವಾಳ ತಾಲೂಕಿನ ಬೆಂಜನಪದವಿನಲ್ಲಿ ಅಶ್ರಫ್ ಎಂಬವರನ್ನು ದುಷ್ಕರ್ಮಿಗಳು ಹತ್ಯೆ ನಡೆಸಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲೂ 144 ಸೆಕ್ಷನ್ ಮುಂದುವರಿಸಲಾಗಿದೆ.
ಜೂ.22 ರಿಂದ ಜೂ.27ರ ಮಧ್ಯರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆಯನ್ನು ವಿಸ್ತರಿಸಲಾಗುವುದು ಎಂದು ದ.ಕ. ಜಿಲ್ಲಾ ಪೊಲೀಸ್ ಕಮಿಷನರ್ ಆದೇಶ ಹೊರಡಿಸಿದ್ದಾರೆ.