ಅಶ್ರಫ್ ರೌಡಿಶೀಟರ್ ಎಂದು ಪೊಲೀಸರು ಮಾಧ್ಯಮಗಳಿಗೆ ಮಾಹಿತಿ ನೀಡಿಲ್ಲ: ಎಡಿಜಿಪಿ ಸ್ಪಷ್ಪನೆ
Update: 2017-06-22 15:21 IST
ಮಂಗಳೂರು, ಜೂ.22: ಬೆಂಜನಪದವಿನಲ್ಲಿ ಬುಧವಾರ ಹತ್ಯೆಗೀಡಾದ ಕಲಾಯಿ ಮಜಲು ನಿವಾಸಿ ಮುಹಮ್ಮದ್ ಅಶ್ರಫ್ ರೌಡಿಶೀಟರ್ ಎಂಬುದಾಗಿ ಪೊಲೀಸ್ ಅಧಿಕಾರಿಗಳು ಮಾಧ್ಯಮಗಳಿಗೆ ಮಾಹಿತಿ ನೀಡಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತನಗೆ ತಿಳಿಸಿರುವುದಾಗಿ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಅಲೋಕ್ ಮೋಹನ್ ಸ್ಪಷ್ಟಪಡಿಸಿದ್ದಾರೆ.
ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಈ ಸ್ಪಷ್ಟನೆ ನೀಡಿದ ಅವರು, ಮಾಧ್ಯಮಗಳು ಇಂತಹ ಸುದ್ದಿಗಳನ್ನು ಬಿತ್ತರಿಸುವಾಗ ಸ್ಥಳೀಯ ಪೊಲೀಸರಿಂದ ಮಾಹಿತಿ ಪಡೆದು ದೃಢಪಡಿಸಿಕೊಳ್ಳುವುದು ಸೂಕ್ತ ಎಂದು ಸಲಹೆ ನೀಡಿದರು.