ಕಾರು ಢಿಕ್ಕಿ: ಪಾದಚಾರಿ ಮೃತ್ಯು
Update: 2017-06-22 16:45 IST
ಕಾಸರಗೋಡು, ಜೂ. 22: ಕಾರು ಢಿಕ್ಕಿ ಹೊಡೆದು ಪಾದಚಾರಿ ಮೃತಪಟ್ಟ ಘಟನೆ ರಾಜ್ಯ ಹೆದ್ದಾರಿಯ ಉದುಮದಲ್ಲಿ ನಡೆದಿದೆ. ಮೃತರನ್ನು ಇಡುಕ್ಕಿ ಕಟ್ಟಪ್ಪನದ ಕೆ.ಕೆ. ಗೋಪಾಲ (70) ಎಂದು ಗುರುತಿಸಲಾಗಿದೆ.
ಕೂಲಿ ಕಾರ್ಮಿಕರಾಗಿದ್ದ ಇವರು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದಾಗ ಹಿಂದಿನಿಂದ ಬಂದ ಕಾರು ಢಿಕ್ಕಿ ಹೊಡೆದಿದ್ದು, ಗಂಭೀರ ಗಾಯ ಗೊಂಡ ಗೋಪಾಲರನ್ನು ಮಂಗಳೂರು ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ ಎಂದು ತಿಳಿದುಬಂದಿದೆ. ಈ ಬಗ್ಗೆ ಬೇಕಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.