ರಾಷ್ಟ್ರಪತಿ ಚುನಾವಣೆ: ವಿಪಕ್ಷಗಳ ಅಭ್ಯರ್ಥಿಯಾಗಿ ಮೀರಾ ಕುಮಾರ್

Update: 2017-06-22 12:22 GMT

ಹೊಸದಿಲ್ಲಿ, ಜೂ.22: ರಾಷ್ಟ್ರಪತಿ ಚುನಾವಣಾ ಅಭ್ಯರ್ಥಿಯಾಗಿ ವಿಪಕ್ಷಗಳು ಲೋಕಸಭೆಯ ಮಾಜಿ ಸ್ಪೀಕರ್ ಮೀರಾ ಕುಮಾರ್ ರನ್ನು ಆಯ್ಕೆ ಮಾಡಿದೆ.

ರಾಷ್ಟ್ರಪತಿ ಚುನಾವಣಾ ಅಭ್ಯರ್ಥಿಯ ಆಯ್ಕೆಗಾಗಿ ವಿಪಕ್ಷಗಳು ಸಭೆ ನಡೆಸಿದ್ದು, ಸಭೆಯ ಬಳಿಕ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿಪಕ್ಷಗಳ ಅಭ್ಯರ್ಥಿಯಾಗಿ ಮೀರಾ ಕುಮಾರ್ ರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.

ಈ ಸಭೆಯಲ್ಲಿ ಸುಮಾರು 17 ವಿಪಕ್ಷಗಳ ನಾಯಕರು ಭಾಗವಹಿಸಿದ್ದರು. ಈ ಹಿಂದೆ ಯುಪಿಎ ಸರಕಾರದ ಅವಧಿಯಲ್ಲಿ ಮೀರಾ ಕುಮಾರ್ ಸ್ಪೀಕರ್ ಆಗಿ ಕಾರ್ಯ ನಿರ್ವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News