ಜ.ಕೆ.ಎಸ್.ತಿಮ್ಮಯ್ಯ ನಗದು ಪ್ರಶಸ್ತಿಗೆ ಅರ್ಜಿ ಆಹ್ವಾನ

Update: 2017-06-22 14:55 GMT

ಉಡುಪಿ, ಜೂ. 22: 2017ರಲ್ಲಿ ನಡೆದ ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಗರಿಷ್ಠ ಅಂಕ ಪಡೆದ ಕರ್ನಾಟಕದ ಮೂಲ ನಿವಾಸಿ ಮಾಜಿ ಸೈನಿಕರ ಮಕ್ಕಳಿಗೆ ‘ಜನರಲ್ ಕೆ.ಎಸ್.ತಿಮ್ಮಯ್ಯ’ ನಗದು ಪ್ರಶಸ್ತಿ ನೀಡುವುದಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಮಂಗಳೂರು ಇಲ್ಲಿಂದ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಸ್ವೀಕರಿಸಲು ಆ.30 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಮಂಗಳೂರು ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News