×
Ad

ಹಸು ಕಳವು: ಆರೋಪಿಯ ಬಂಧನ

Update: 2017-06-22 21:58 IST

ಮಂಗಳೂರು, ಜೂ. 22: ಹಸುಗಳನ್ನು ಕಳವು ಮಾಡುತ್ತಿದ್ದ ವಿವಿಧ ಪ್ರಕರಣಗಳ ಆರೋಪಿಯೋರ್ವನನ್ನು ಬಜ್ಪೆ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ತೆಂಕಮಿಜಾರು ಗ್ರಾಮದ ತೋಡಾರ್ ನಿವಾಸಿ ಮುಹಮ್ಮದ್ ಆರಿಫ್ ಯಾನೆ ಪುಚ್ಚೇರಿ ಬಂಧಿತ ಆರೋಪಿ.

ಈತನ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ 5 ಪ್ರಕರಣಗಳು, ಕೊಡಗು ಜಿಲ್ಲಾ ಪೊಲೀಸ್ ಠಾಣೆಗಳಲ್ಲಿ 7 ಪ್ರಕರಣಗಳು ಹಾಗೂ ಸುರತ್ಕಲ್, ಕಾವೂರು, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ತಲಾ ಒಂದು ಪ್ರಕರಣಗಳು ದಾಖಲಾಗಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News