ಪಾಕಿಸ್ತಾನದ ಟೆಸ್ಟ್ ನಾಯಕನಾಗಿ ಸರ್ಫರಾಝ್ ಅಹ್ಮದ್?

Update: 2017-06-22 18:14 GMT

ಕರಾಚಿ, ಜೂ.22: ಇತ್ತೀಚೆಗಷ್ಟೇ ಚಾಂಪಿಯನ್ಸ್ ಟ್ರೋಫಿಯನ್ನು ಜಯಿಸಿರುವ ಪಾಕಿಸ್ತಾನದ ಸೀಮಿತ ಓವರ್ ಕ್ರಿಕೆಟ್ ತಂಡದ ನಾಯಕ ಸರ್ಫರಾಝ್ ಅಹ್ಮದ್ ಟೆಸ್ಟ್ ತಂಡದ ನಾಯಕನಾಗಿಯೂ ಆಯ್ಕೆಯಾಗುವ ಸಾಧ್ಯತೆಯಿದೆ.

ಪಿಸಿಬಿ ಅಧ್ಯಕ್ಷ ಶಹರ್ಯಾರ್ ಖಾನ್ ಸ್ವದೇಶಕ್ಕೆ ವಾಪಸಾದ ತಕ್ಷಣ ಟೆಸ್ಟ್ ನಾಯಕನನ್ನು ಅಧಿಕೃತವಾಗಿ ಘೋಷಿಸಲಿದ್ದಾರೆ. ಈಗಾಗಲೆ ಅಂತಿಮ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಇತ್ತೀಚೆಗೆ ವೆಸ್ಟ್‌ಇಂಡೀಸ್ ಪ್ರವಾಸದಲ್ಲಿ ಮಿಸ್ಬಾವುಲ್ ಹಕ್‌ರ ಉಪ ನಾಯಕನಾಗಿ ಆಯ್ಕೆಯಾಗಿದ್ದ ಸರ್ಫರಾಝ್‌ರನ್ನು ನಾಯಕರನ್ನಾಗಿ ಆಯ್ಕೆಯಾಗಲಿದ್ದಾರೆ. ಅಹ್ಮದ್ ಇದೀಗ ಏಕದಿನ ಹಾಗೂ ಟ್ವೆಂಟಿ-20 ತಂಡದ ನಾಯಕನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಏಳು ವರ್ಷಗಳ ಕಾಲ ಪಾಕ್ ತಂಡ ಟೆಸ್ಟ್ ನಾಯಕನಾಗಿ ಮಿಸ್ಬಾವುಲ್ ಹಕ್ ವೆಸ್ಟ್‌ಇಂಡೀಸ್ ಸರಣಿಯ ಬಳಿಕ ನಿವೃತ್ತಿಯಾಗಿದ್ದರು. 2010ರಲ್ಲಿ ಟೆಸ್ಟ್ ನಾಯಕನಾಗಿ ಆಯ್ಕೆಯಾಗಿದ್ದ ಹಕ್ ಪಾಕ್‌ನ ಯಶಸ್ವಿ ನಾಯಕನಾಗಿ ಗುರುತಿಸಿಕೊಂಡಿದ್ದಾರೆ.

ಪಾಕಿಸ್ತಾನ ಸೆಪ್ಟಂಬರ್-ಅಕ್ಟೋಬರ್‌ನಲ್ಲಿ ಯುಎಇಯಲ್ಲಿ ಶ್ರೀಲಂಕಾದ ವಿರುದ್ಧ ಟೆಸ್ಟ್ ಸರಣಿಯನ್ನಾಡಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News