‘ಸ್ಮಾರ್ಟ್‌ಸಿಟಿ’ಗೆ ಬೆಂಗಳೂರು ಆಯ್ಕೆ: ಸಚಿವ ಕೆ.ಜೆ.ಜಾರ್ಜ್ ಪ್ರಶಂಸೆ

Update: 2017-06-23 14:45 GMT

ಬೆಂಗಳೂರು, ಜೂ. 23: ಬೆಂಗಳೂರು ನಗರವನ್ನು ಕೊನೆಗೂ ಕೇಂದ್ರ ಸರಕಾರ ‘ಸ್ಮಾರ್ಟ್‌ಸಿಟಿ’ ಯೋಜನೆಯಡಿ ಅಭಿವೃದ್ಧಿಪಡಿಸಲು ಆಯ್ಕೆ ಮಾಡಿರುವುದು ಹೆಮ್ಮೆಯ ಸಂಗತಿ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಇಂದಿಲ್ಲಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರು ನಗರವನ್ನು ಸ್ಮಾರ್ಟ್‌ಸಿಟಿ ಯೋಜನೆಯಡಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಬಿಬಿಎಂಪಿ ಮೇಯರ್, ಆಯುಕ್ತರು ಸೇರಿದಂತೆ ಅಧಿಕಾರಿಗಳನ್ನು ಅಭಿನಂದಿಸುವೆ ಎಂದರು.

ಬೆಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿ ಆಯ್ಕೆಯಾಗಿದ್ದು, ನಗರದ ಅಭಿವೃದ್ಧಿಗೆ ಕೇಂದ್ರದಿಂದ 1,700 ಕೋಟಿ ರೂ.ಗಳಷ್ಟು ಅನುದಾನ ದೊರೆಯಲಿದೆ. ನಗರದ ರಸ್ತೆಗಳನ್ನು ಟೆಂಡರ್ ಶ್ಯೂರ್ ಯೋಜನೆಯಡಿ ಅಭಿವೃದ್ಧಿಪಡಿಸಲು ಆದ್ಯತೆ ನೀಡಲಾಗುವುದು.
ಅಲ್ಲದೆ, ನಗರದ ಹೊರ ವರ್ತುಲ ರಸ್ತೆಗಳು, ಉದ್ಯಾನವನಗಳು ಸೇರಿದಂತೆ ಮೂಲ ಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದ ಅವರು, ಸ್ಮಾರ್ಟ್ ಟಿಸಿ ಯೋಜನೆಯಡಿ ನಗರದ ಅಭಿವೃದ್ಧಿಪಡಿಸಲು ತಡವಾಗಿಯಾದರೂ ಆಯ್ಕೆ ಮಾಡಿದ ಕೇಂದ್ರ ಸಚಿವ ವೆಂಕಯ್ಯನಾಯ್ಡು ಅವರಿಗೆ ಅಭಿನಂದನೆ ಸಲ್ಲಿಸುವೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News