ಗಾಂಜಾ ಸೇವನೆ: ನಾಲ್ವರ ಬಂಧನ

Update: 2017-06-23 16:30 GMT

ಮಂಗಳೂರು, ಜೂ. 23: ಗಾಂಜಾ ಸೇವನೆ ಮಾಡುತ್ತಿದ್ದರೆಂಬ ಆರೋಪದಡಿ ನಗರದ ಪ್ರತಿಷ್ಠಿತ ಕಾಲೇಜೊಂದರ ನಾಲ್ವರು ವಿದ್ಯಾರ್ಥಿಗಳನ್ನು ಬಿಜೈ ಕೆಎಸ್ಸಾರ್ಟಿಸಿ ಬಳಿಯಿಂದ ಬರ್ಕೆ ಠಾಣಾ ಪೊಲೀಸರು ಬಂಧಿಸಿದ್ದಾರೆ.

ನಿತಿನ್, ಅಮನ್, ಅತುಲ್ ಹಾಗೂ ರೋಹಿತ್ ಬಂಧಿತ ಆರೋಪಿಗಳು.

ಬರ್ಕೆ ಇನ್ಸ್‌ಸ್ಪೆಕ್ಟರ್ ರಾಮಕೃಷ್ಣ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ಬಳಿಕ ವೈದ್ಯಕೀಯ ಪರೀಕ್ಷೆಗೊಳಪಡಿಸಲಾ ಯಿತು. ಅವರು ಗಾಂಜಾ ಸೇವನೆ ಮಾಡಿರುವುದು ವೈದ್ಯಕೀಯ ಪರೀಕ್ಷೆಯಿಂದ ದೃಢಪಟ್ಟಿದ್ದು, ಅವರ ವಿರುದ್ದ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News