ಬಂಧನ ಭೀತಿ ಎದುರಿಸುತ್ತಿರುವ ರವಿ ಬೆಳಗೆರೆ ಆಸ್ಪತ್ರೆಗೆ ದಾಖಲು
ಬೆಂಗಳೂರು, ಜೂ.24: ವಿಧಾನಸಭೆಯ ಸದನ ಸಮಿತಿಯಿಂದ ಶಿಕ್ಷೆಗೆ ಗುರಿಯಾಗಿರುವ ಹಾಯ್ ಬೆಂಗಳೂರು ಪತ್ರಿಕೆ ಸಂಪಾದಕ ರವಿ ಬೆಳಗೆರೆ ಅವರು ಅನಾರೋಗ್ಯದಿಂದಾಗಿ ಎಸ್ ಡಿಎಂ ಆಸ್ಪತ್ರಗೆ ದಾಖಲಾಗಿದ್ದು, ಅವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ಧಾರೆ.
ಉತ್ತರ ಕನ್ನಡದ ಜೋಯಿಡಾದ ತನ್ನ ತೋಟದ ಮನೆಯಲ್ಲಿದ್ದ ರವಿ ಬೆಳಗೆರೆ ಅವರಿಗೆ ಇಂದು ಬೆಳಗ್ಗಿನ ಜಾವ ರಕ್ತದೊತ್ತಡ ಮತ್ತು ಮಧುಮೇಹ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಅವರನ್ನು ಧಾರವಾಡದ ಎಸ್ ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ
ಅವಹೇಳನಕಾರಿಯಾಗಿ ಸುದ್ದಿ ಪ್ರಕಟಿಸಿದ ಆರೋಪದಲ್ಲಿ ಸ್ಪೀಕರ್ ಕೆ.ಬಿ. ಕೋಳಿವಾಡ ಅವರು ರವಿಬೆಳೆಗೆರೆ ಹಾಗೂ ಯಲಹಂಕ ವಾಯ್ಸ್ ಪತ್ರಿಕೆ ಸಂಪಾದಕ ಅನಿಲ್ ರಾಜ್ ಗೆ 1 ವರ್ಷ ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿದ್ದರು.
ಸ್ವೀಕರ್ ಆದೇಶದಂತೆ ಬೆಂಗಳೂರು ಪೊಲೀಸರು ರವಿಬೆಳಗೆರೆ ಬಂಧನಕ್ಕೆ ಆಗಮಿಸಿದ್ಧಾರೆ.
ಹಾಯ್ ಬೆಂಗಳೂರು ಪತ್ರಿಕೆಯಲ್ಲಿ ಸ್ಪೀಕರ್ ಕೋಳಿವಾಡ ಸೇರಿದಂತೆ ಹಲವು ರಾಜಕಾರಣಿಗಳ ವಿರುದ್ಧ ಮತ್ತು ಯಲಹಂಕ ವಾಯ್ಸ್ ಪತ್ರಿಕೆಯಲ್ಲಿ ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ವಿರುದ್ಧ ನಿರಂತರವಾಗಿ ಅವಹೇಳಕಾರಿಯಾಗಿ ವರದಿ ಪ್ರಕಟಿಸಿದ ಆರೋಪದಲ್ಲಿ ಹಾಯ್ ಬೆಂಗಳೂರು ಪತ್ರಿಕೆಯ ಸಂಪಾದಕ ಬೆಳಗೆರೆ ಮತ್ತು ಯಲಹಂಕ ವಾಯ್ಸ್ ಪತ್ರಿಕೆಯ ಸಂಪಾದಕ ಅನಿಲ್ ರಾಜ್ ವಿರುದ್ಧ ವಿಧಾನಸಭೆಯಲ್ಲಿ ಹಕ್ಕುಚ್ಯುತಿ ಮಂಡಿಸಲಾಗಿತ್ತು.