ಸುಕ್ಮಾದಲ್ಲಿ ಮಾವೋವಾದಿಗಳೊಂದಿಗೆ ಗುಂಡಿನ ಕಾಳಗ: 3 ಜವಾನರಿಗೆ ಗಂಭೀರ ಗಾಯ

Update: 2017-06-24 10:28 GMT

ಸುಕ್ಮಾ, ಜೂ.24: ಛತ್ತೀಸ್ ಗಡದ ಸುಕ್ಮಾ ಜಿಲ್ಲೆಯಲ್ಲಿ ಮಾವೋವಾದಿಗಳೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಮೂವರು ಪ್ಯಾರಾಮಿಲಿಟರಿ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಘಟನೆಯಲ್ಲಿ ಐವರು ಜವಾನರು ಗಾಯಗೊಂಡಿದ್ದು, ಅದರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾವೋವಾದಿಗಳ ವಿರುದ್ಧ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News