ಮುಖ್ಯಮಂತ್ರಿ ಸಿದ್ಧರಾಮಯ್ಯ ನಾಳೆ ಹೊಸದಿಲ್ಲಿಗೆ
Update: 2017-06-25 17:12 IST
ಬೆಂಗಳೂರು, ಜೂ. 25: ಗೃಹ ಸಚಿವ ಸ್ಥಾನಕ್ಕೆ ಡಾ.ಜಿ.ಪರಮೇಶ್ವರ್ ರಾಜೀನಾಮೆ ಹಿನ್ನೆಲೆಯಲ್ಲಿ ತೆರವಾಗಿರುವ ಸಚಿವ ಸ್ಥಾನಗಳ ಭರ್ತಿಗೆ ಆಕಾಂಕ್ಷಿಗಳ ಒತ್ತಡ ಹೆಚ್ಚಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ ನಾಳೆ ಹೊಸದಿಲ್ಲಿಗೆ ತೆರಳಲಿದ್ದಾರೆ.
ರವಿವಾರ ನಗರದಲ್ಲಿ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಸಂಬಂಧ ಪಕ್ಷದ ವರಿಷ್ಠರೊಂದಿಗೆ ಸಮಾಲೋಚನೆ ನಡೆಸಲಾಗುವುದು. ಜೂ.28ರಂದು ವರಿಷ್ಟರೊಂದಿಗೆ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಿ ನಿರ್ಮಾನ ಕೈಗೊಳ್ಳಲಾಗುವುದು. ಶೀಘ್ರದಲ್ಲೆ ಸಚಿವ ಸಂಪುಟ ವಿಸ್ತರಣೆ ಇಚ್ಛೆ ಹೊಂದಿದ್ದೇನೆ. ಸಂಪುಟ ವಿಸ್ತರಣೆ ಆಗಲಿದೆ ಎಂದು ಸ್ಪಷ್ಟಪಡಿಸಿದರು.
ಸಹಕಾರಿ ಸಚಿವ ಎಚ್.ಎಸ್.ಮಹದೇವ ಪ್ರಸಾದ್ ಅಕಾಲಿಕ ನಿಧನ, ಅಬಕಾರಿ ಸಚಿವ ಎಚ್.ವೈ.ಮೇಟಿ ಹಾಗೂ ಪರಮೇಶ್ವರ್ ರಾಜೀನಾಮೆ ಹಿನ್ನೆಲೆಯಲ್ಲಿ ಮೂರು ಸ್ಥಾನಗಳು ಖಾಲಿಯಿದ್ದು, ಆ ಮೂರು ಸ್ಥಾನಗಳನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೈಕಮಾಂಡ್ ಸಮ್ಮತಿ ಪಡೆದು ಕೂಡಲೇ ಭರ್ತಿ ಮಾಡುವ ಸಾಧ್ಯತೆಗಳಿವೆ.