×
Ad

62 ವರ್ಷದ ವೃದ್ಧನಿಂದ 12 ವರ್ಷದ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ

Update: 2017-06-25 18:54 IST

ಬೆಂಗಳೂರು, ಜೂ. 25: ಹನ್ನೊಂದು ವರ್ಷದ ಬಾಲಕಿಯ ಮೇಲೆ 62 ವರ್ಷದ ವೃದ್ಧನೋರ್ವ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಹಿನ್ನೆಲೆಯಲ್ಲಿ ಬಾಲಕಿಯ ಸಂಬಂಧಿಕರು ಆರೋಪಿ ವೃದ್ದನ ಪತ್ನಿಯ ಮೇಲೆ ಹಲ್ಲೆ ನಡೆಸಿದ ಘಟನೆ ಇಲ್ಲಿನ ಚಂದ್ರಾ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇಲ್ಲಿನ ಅತ್ತಿಗುಪ್ಪೆಯ ಇಂದಿರಾ ನಗರದಲ್ಲಿ 11ವರ್ಷದ ಬಾಲಕಿ ಮೇಲೆ 62 ವರ್ಷದ ವೃದ್ಧನೋರ್ವ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ. ಬಾಲಕಿಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ವೃದ್ಧ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆಂದು ಹೇಳಲಾಗಿದೆ.

ಲೈಂಗಿಕ ದೌರ್ಜನ್ಯದ ಸುದ್ಧಿ ತಿಳಿದ ಹಿನ್ನೆಲೆಯಲ್ಲಿ ಬಾಲಕಿ ಪೋಷಕರು, ಆರೋಪಿ ವೃದ್ಧನ ಮನೆಯ ಮೇಲೆ ದಾಳಿ ನಡೆಸಿ ಆತನ ಪತ್ನಿಯ ಮೇಲೆ ಹಲ್ಲೆ ನಡೆಸಿದ್ದಾರೆ.

ಈ ಸಂಬಂಧ ಚಂದ್ರಾ ಲೇಔಟ್ ಠಾಣಾ ಪೊಲೀಸರು ವೊಕದ್ದಮೆ ದಾಖಲು ಮಾಡಿಕೊಂಡಿದು ಆರೋಪಿಯನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News