ವೈಯಕ್ತಿಕ ದ್ವೇಷದ ಹಿನ್ನೆಲೆ: ಶ್ರೀರಾಮಸೇನೆ ಜಿಲ್ಲಾಧ್ಯಕ್ಷನಿಗೆ ಚೂರಿ ಇರಿತ
Update: 2017-06-25 18:59 IST
ಗದಗ, ಜೂ. 25: ಹಳೆ ದ್ವೇಷದ ಹಿನ್ನೆಲೆಯಲ್ಲಿ ಉಂಟಾದ ಜಗಳದ ವೇಳೆ ಇಲ್ಲಿನ ಶ್ರೀರಾಮಸೇನೆ ಜಿಲ್ಲಾಧ್ಯಕ್ಷನ ಮೇಲೆ ವ್ಯಕ್ತಿಯೊಬ್ಬ ಚೂರಿಯಿಂದ ಇರಿದ ಘಟನೆ ಗದಗ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರವಿವಾರ ವರದಿಯಾಗಿದೆ.
ಚೂರಿ ಇರಿತದಿಂದ ಗಾಯಗೊಂಡಿರುವ ಶ್ರೀರಾಮಸೇನೆ ಜಿಲ್ಲಾಧ್ಯಕ್ಷನನ್ನು ಬಸವರಾಜ್ ಕುರ್ತಕೋಟಿ ಎಂದು ಪೊಲೀಸರು ತಿಳಿಸಿದ್ದಾರೆ.
ಇಲ್ಲಿನ ಗದಗ ನಗರದ ಗಂಗಾಪುರ ಪೇಟೆಯಲ್ಲಿ ಘಟನೆ ನಡೆಸಿದ್ದು, ಚೂರಿ ಇರಿತ ಪ್ರಕರಣ ಸಂಬಂಧ ಸುರೇಶ್ ಬೆಳದಡಿ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಸವರಾಜ್ ಕುರ್ತಕೋಟಿಯೂ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆಂದು ಆರೋಪಿ ಎನ್ನಲಾದ ಸುರೇಶ್ ದೂರು ನೀಡಿದ್ದಾರೆ. ಇಬ್ಬರು ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಗದಗ ನಗರ ಠಾಣಾ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.