×
Ad

ಮಗುವಿನೊಂದಿಗೆ ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ

Update: 2017-06-26 21:44 IST

ಬಂಟ್ವಾಳ, ಜೂ. 26: ಮಗುವಿನೊಂದಿಗೆ ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆಗೆ ಶರಣಾದ ಘಟನೆ ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ನೆಕ್ಕರೆಕಾಡು ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ.

ವಿಟ್ಲ ನೆಲ್ಲಿಗುಡ್ಡೆ ನಿವಾಸಿಗಳಾದ ನಾಝಿಯಾ (35), ಅವರ ಪುತ್ರ ನುಮಾನ್ ಅಹ್ಮದ್(ಎರಡೂವರೆ ವರ್ಷ) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ನೆಲ್ಲಿಗುಡ್ಡೆಯ ನಿವಾಸಿಗಳಾದ ಇವರು ಹಬ್ಬದ ನಿಮಿತ್ತ ರವಿವಾರ ನೆಕ್ಕರೆಕಾಡುವಿನ ಅಣ್ಣನ ಮನೆಗೆ ಬಂದಿದ್ದರು. ಕಾಯಿಲೆಯಿಂದ ಬಳಲುತ್ತಿರುವ ನಾಝಿಯಾ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆ ವಿಟ್ಲ ಠಾಣೆ ಎಸ್ಸೈ ನಾಗರಾಜ್ ಮತ್ತು ಸಿಬ್ಬಂದಿ ಭೇಟಿ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ವಿಟ್ಲ ಪೊಲೀಸ್ ಠಾಣೆಯಲ್ಲಿ ರಾತ್ರಿ 9 ಗಂಟೆಯವರೆಗೆ ಯಾವುದೇ ದೂರು ದಾಖಲಾಗಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News