ಧಾರಾಕಾರ ಮಳೆ: ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಏರಿಕೆ
Update: 2017-06-26 22:15 IST
ಬಂಟ್ವಾಳ, ಜೂ. 26: ರವಿವಾರ ಮತ್ತು ಸೋಮವಾರ ಸುರಿದ ಧಾರಾಕಾರ ಮಳೆಗೆ ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ದಿಢೀರ್ ಏರಿಕೆಯಾಗಿದೆ.
ರವಿವಾರ ಬೆಳಗ್ಗೆ 9 ಗಂಟೆಗೆ ನೇತ್ರಾವತಿ ನದಿ ನೀರಿನ ಮಟ್ಟ 3.1 ಇದ್ದು ಸೋಮವಾರ ಬೆಳಗ್ಗೆ 9 ಗಂಟೆಗೆ 3.5 ಆಗಿತ್ತು. ಸಂಜೆ 5 ಗಂಟೆಯ ಸುಮಾರಿಗೆ ನೀರಿನ 5.2 ಮೀಟರ್ ಏರಿಕೆಯಾಗುವ ಮೂಲಕ 8 ಗಂಟೆಗಳಲ್ಲಿ 1.7 ಮೀಟರ್ ನೀರು ಹೆಚ್ಚಳವಾಗಿದೆ.
ಬಂಟ್ವಾಳ ತಾಲೂಕಿನಲ್ಲಿ ರವಿವಾರ ಬೆಳಗ್ಗೆ 9 ಗಂಟೆಯಿಂದ ಸೋಮವಾರ ಬೆಳಗ್ಗೆ 9 ಗಂಟೆಯವರೆಗೆ 100.2 ಮಿಲಿ ಮೀಟರ್ ಮಳೆಯಾಗಿದೆ. ಶನಿವಾರ ಬೆಳಗ್ಗೆ 9 ಗಂಟೆಯಿಂದ ರವಿವಾರ ಬೆಳಗ್ಗೆ 9 ಗಂಟೆಯವರೆಗೆ 88.2 ಮಿಲಿ ಮೀಟರ್ ಮಳೆಯಾಗಿತ್ತು.
ತುಂಬೆ ಡ್ಯಾಂ ಗೇಟ್ ಓಪನ್: ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿರುವುದರಿಂದ ತುಂಬೆ ವೆಂಟೆಡ್ ಡ್ಯಾಂನ ಗೇಟ್‌ಗಳನ್ನು ತೆರೆದು ನೀರು ಹೊರಬಿಡಲಾಗುತ್ತಿದೆ. ಡ್ಯಾಂನ ಒಟ್ಟು 31 ಗೇಟ್‌ಗಳ ಪೈಕಿ 21 ಗೇಟ್‌ಗಳನ್ನು ತೆರೆಯಲಾಗಿದೆ.