ಮಾಲೂರುನಲ್ಲಿ ಸಂಭ್ರಮದ ಈದುಲ್ ಫಿತ್ರ್
Update: 2017-06-26 22:32 IST
ಮಾಲೂರು, ಜೂ. 26: ಮಾಲೂರು ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸೋಮವಾರ ಈದುಲ್ ಫಿತ್ರ್ ಆಚರಿಸಲಾಯಿತು.
ಪಟ್ಟಣದ ಈದ್ಗಾ ಮೈದಾನದಲ್ಲಿ ಈದ್ ನಮಾಝ್ ನಡೆಯಿತು. ಬೆಂಗಳೂರು ಮುಖ್ಯ ರಸ್ತೆಯಲ್ಲಿರುವ ಈದ್ಗಾ ಮೈದಾನಕ್ಕೆ ಕಾಲು ನಡಿಗೆಯಲ್ಲಿ ತೆರಳಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಶಾಸಕ ಕೆ.ಎಸ್. ಮಂಜುನಾಥ ಗೌಡ ನೇತೃತ್ವದಲ್ಲಿ ಜೆಡಿಎಸ್ ಜನಪ್ರತಿನೀಧಿಗಳು, ಕೋಚಿಮುಲ್ ನಿರ್ದೇಶಕ ಕೆ.ವೈ.ನಂಜೇಗೌಡ ನೇತೃತ್ವದಲ್ಲಿ ಕಾಂಗ್ರೇಸ್ ಮುಖಂಡರು ಜನಪ್ರತಿನಿಧಿಗಳು ಈದ್ಗಾ ಮೈದಾನಕ್ಕೆ ತೆರಳಿ ಶುಭಾಶಯ ಕೋರಿದರು.