×
Ad

ಆಗಸ್ಟ್‌ನಲ್ಲಿ ವೃತ್ತಿಜೀವನದ ಭವಿಷ್ಯ ನಿರ್ಧರಿಸಲಿರುವ ಡಿವಿಲಿಯರ್ಸ್

Update: 2017-06-26 23:06 IST

ಲಂಡನ್, ಜೂ.26: ಆಗಸ್ಟ್‌ನಲ್ಲಿ ಕ್ರಿಕೆಟ್ ದಕ್ಷಿಣ ಆಫ್ರಿಕದ ಅಧಿಕಾರಿಗಳನ್ನು ಭೇಟಿಯಾಗಲಿರುವ ಎಬಿ ಡಿವಿಲಿಯರ್ಸ್ ತನ್ನ ವೃತ್ತಿಬದುಕಿನ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ.

ಮುಂದಿನ ಕೆಲವು ವರ್ಷಗಳಲ್ಲಿ ಏನಾಗಬಹುದೆಂಬ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದು ಡಿವಿಲಿಯರ್ಸ್ ಹೇಳಿದ್ದಾರೆ.

ದಕ್ಷಿಣ ಆಫ್ರಿಕ ತಂಡ ಕಾರ್ಡಿಫ್‌ನಲ್ಲಿ ಇಂಗ್ಲೆಂಡ್‌ನ ವಿರುದ್ಧ 1-2 ಅಂತರದಿಂದ ಸೋತ ಬಳಿಕ ಸುದ್ದಿಗಾರರೊಂದಿಗೆ ಡಿವಿಲಿಯರ್ಸ್ ಈ ವಿಷಯ ತಿಳಿಸಿದರು.

ಕಳೆದ ವರ್ಷ ಗಾಯದಿಂದಾಗಿ ಆಸ್ಟ್ರೇಲಿಯ ಪ್ರವಾಸದಿಂದ ಹೊರಗುಳಿದಿದ್ದ ಡಿವಿಲಿಯರ್ಸ್ ಟೆಸ್ಟ್ ಕ್ರಿಕೆಟ್‌ನಿಂದ ವಿರಾಮ ಪಡೆದಿದ್ದರು. 2019ರ ವಿಶ್ವಕಪ್ ತನಕ ಕೆಲಸದ ಭಾರ ಕಡಿಮೆ ಮಾಡಿಕೊಳ್ಳುವ ಇಂಗಿತವನ್ನು ವ್ಯಕ್ತಪಡಿಸಿದ್ದರು. ದಕ್ಷಿಣ ಆಫ್ರಿಕ ಸೆಪ್ಟಂಬರ್‌ನಲ್ಲಿ ಬಾಂಗ್ಲಾದೇಶಕ್ಕೆ ಪ್ರವಾಸ ಕೈಗೊಂಡ ಸಂದರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ವಾಪಸಾಗಲು ಯೋಜನೆ ಹಾಕಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News