ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಹರೀಶ್ ಕುಮಾರ್
Update: 2017-06-27 15:43 IST
ಮಂಗಳೂರು, ಜೂ.27: ದ.ಕ.ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಬೆಳ್ತಂಗಡಿಯ ಹರೀಶ್ ಕುಮಾರ್ ನೇಮಕಗೊಂಡಿದ್ದಾರೆ.
ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಹರೀಶ್ ಕುಮಾರ್‌ರ ನೇಮಕವನ್ನು ಡಿಸಿಸಿ ನಿರ್ಗಮನ ಅಧ್ಯಕ್ಷ ರಮಾನಾಥ ರೈ ಶನಿವಾರ ಸುದ್ದಿಗೋಷ್ಠಿಯಲ್ಲಿ ಘೋಷಿಸಿದರು.
ಜಿಲ್ಲೆಯ ಎಲ್ಲ ಶಾಸಕರ, ಪಕ್ಷದ ಮುಖಂಡರ ಸಲಹೆಯ ಮೇರೆಗೆ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಈ ನೇಮಕಾತಿ ಮಾಡಿದ್ದು, ಮುಂದಿನ ದಿನಗಳಲ್ಲಿ ಹರೀಶ್ ಕುಮಾರ್ ಪಕ್ಷವನ್ನು ಬಲಿಷ್ಠಗೊಳ್ಳಲು ಶ್ರಮಿಸಲಿದ್ದಾರೆ ಎಂದರು.