ಒಳಚರಂಡಿ ಅವ್ಯವಸ್ಥೆಯನ್ನು ವಿರೋಧಿಸಿ ಸಿಪಿಐ(ಎಂ) ಪ್ರತಿಭಟನೆ.
ಮಂಗಳೂರು, ಜೂ.27: ಕೊಂಚಾಡಿ ಕಳೆದ ವರ್ಷ ಕೊಂಚಾಡಿಯಲ್ಲಿ ಆರಂಭಗೊಂಡ ಒಳಚರಂಡಿ ಕಾಮಗಾರಿಯು ಅವೈಜ್ಙಾನಿಕ ರೀತಿಯಲ್ಲಿ ನಡೆಯುತ್ತಿದ್ದು, ಕಾಮಗಾರಿಯನ್ನು ಪೂರ್ತಿಗೊಳಿಸಲು ನಗರಪಾಲಿಕೆ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಸಿಪಿಐ(ಎಂ) ಕಾರ್ಯಕರ್ತರು ಕೊಂಚಾಡಿಯಲ್ಲಿ ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರನ್ನು ಉದ್ದೇಶಿಸಿ ಸಿಪಿಐ(ಎಂ)ನ ಮುಖಂಡರಾದ ಕೃಷ್ಣಪ್ಪ ಕೊಂಚಾಡಿಯವರು ಮಾತನಾಡಿ, ಅವೈಜ್ಙಾನಿಕ ರೀತಿಯಲ್ಲಿ ನಡೆಯುತ್ತಿರುವ ಒಳಚರಂಡಿ ಕಾಮಗಾರಿಯಿಂದಾಗಿ ಸ್ಥಳೀಯ ಜನತೆ ತೊಂದರೆ ಅನುಭವಿಸುತ್ತಿದ್ದಾರೆಂದು ಆಪಾದಿಸಿ ಮುಂದಿನ ಒಂದು ತಿಂಗಳೊಳಗೆ ಈ ಕಾಮಗಾರಿಯನ್ನು ಪೂರ್ತಿಗೊಳಿಸಲು ನಗರಪಾಲಿಕೆಯನ್ನು ಆಗ್ರಹಿಸಿದರು.
ಪ್ರತಿಭಟನೆಯನ್ನು ಬೆಂಬಲಿಸಿ ಸಿಪಿಐ(ಎಂ)ನ ಮಂಗಳೂರು ನಗರ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್, ಸಂತೋಷ್ ಶಕ್ತಿನಗರ ಮಾತನಾಡಿದರು. ರವಿಚಂದ್ರ ಕೊಂಚಾಡಿ ಪ್ರಸ್ತಾವಿಕವಾಗಿ ಮಾತನಾಡಿದರು. ನವೀನ್ ಬೊಲ್ಪುಗುಡ್ಡೆ ಸ್ವಾಗತಿಸಿ, ಧನ್ಯವಾದವಿತ್ತರು.