×
Ad

ಕಾರು ಅಪಘಾತ; ಗಾಯಾಳು ಮೃತ್ಯು

Update: 2017-06-27 18:43 IST

ಉಳ್ಳಾಲ, ಜೂ.27: ತಲಪಾಡಿ ಬಳಿ ಕಾರು ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಅಪರಿಚಿತ ಪಾದಚಾರಿಯೋರ್ವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ನಡೆದಿದೆ.

ಜೂ.23ರಂದು ರಾ.ಹೆ.66 ರ ತಲಪಾಡಿ ದಿವ್ಯಾಶ್ರೀ ಬಾರಿನ ಎದುರುಗಡೆ ಅಪಘಾತ ಸಂಭವಿಸಿತ್ತು. ಮಂಗಳೂರಿನಿಂದ ಕೇರಳ ಕಡೆಗೆ ಅತಿವೇಗ ಹಾಗೂ ಅಜಾಗರೂಕತೆಯಿಂದ ಕಾರು ಚಲಾಯಿಸಿಕೊಂಡು ಬಂದ ಚಾಲಕನಿಂದಾಗಿ ರಸ್ತೆ ಬದಿಯಲ್ಲಿ ನಿಂತಿದ್ದ ಸುಮಾರು 50ರ ಹರೆಯದ ಅಪರಿಚಿತ ವ್ಯಕ್ತಿಗೆ ಕಾರು ಢಿಕ್ಕಿ ಹೊಡೆದಿತ್ತು.
    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News