ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಶ್ರೀನಿವಾಸ ಕಿಣಿ
Update: 2017-06-27 19:24 IST
ಬೆಳ್ತಂಗಡಿ, ಜೂ. 27: ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಪಕ್ಷದ ಹಿರಿಯ ಮುಖಂಡ ನಾರಾವಿಯ ಶ್ರೀನಿವಾಸ ಕಿಣಿ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಾ. ಪರಮೇಶ್ವರ ಅವರು ನೇಮಕ ಮಾಡಿದ್ದಾರೆ.
ಶ್ರೀನಿವಾಸ ಕಿಣಿ ಕಳೆದ ಹಲವು ವರ್ಷಗಳಿಂದ ಕೆಪಿಸಿಸಿ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಳ್ತಂಗಡಿ ಎಪಿಎಂಸಿ ಅಧ್ಯಕ್ಷರಾಗಿ ಐದು ವರ್ಷ ಕಾರ್ಯ ನಿರ್ವಹಿಸಿದ ಇವರು ಜಿಲ್ಲಾ ಕೆಡಿಪಿ ಸದಸ್ಯರಾಗಿ, ಅಕ್ರಮ ಸಕ್ರಮ ಸಮಿತಿ ಸದಸ್ಯರಾಗಿ, ತಾಲೂಕು ಕಾನೂನು ಪ್ರಾಧಿಕಾರ ಸದಸ್ಯರಾಗಿ, ನಾರಾವಿ ಗ್ರಾಪಂ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.