ಜಿಲ್ಲಾ ನ್ಯಾಯಾಲಯದಲ್ಲಿ ವಿಶ್ವ ಯೋಗ ದಿನಾಚರಣೆ
ಮಂಗಳೂರು, ಜೂ.27: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು, ಜಿಲ್ಲಾ ಆಯುಶ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಮತ್ತು ಮಂಗಳೂರು ವಕೀಲರ ಸಂಘ (ರಿ), ಮಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಸಭಾಂಗಣದಲ್ಲಿ ಜೂ.21 ರಂದು ವಿಶ್ವ ಯೋಗ ದಿನಾಚರಣೆ-2017 ಕಾರ್ಯಕ್ರಮವನ್ನು ಹ್ಮುಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಕೆ.ಎಸ್. ಬೀಳಗಿ, ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ವಕೀಲರ ಸಂಘದ ಉಪಾಧ್ಯಕ್ಷೆ ಪುಷ್ಪಲತಾ ಯು.ಕೆ. ವಹಿಸಿದ್ದರು. ಅತಿಥಿಗಳಾಗಿ ಜಿಲ್ಲಾ ಆಯುಶ್ ಅಧಿಕಾರಿ ಡಾ. ದೇವದಾಸ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ನ್ಯಾಯಾಧೀಶರು ಭಾಗವಹಿಸಿದ್ದರು. ಸಭಾ ಕಾರ್ಯಕ್ರಮದ ನಂತರ ನ್ಯಾಯಾಧೀಶರು, ನ್ಯಾಯವಾದಿಗಳು, ನ್ಯಾಯಾಲಯಗಳ ಸಿಬ್ಬಂದಿ ವರ್ಗದವರಿಗೆ ಯೋಗ ತರಬೇತಿಯನ್ನು ನಡೆಸಲಾಯಿತು. ಯೋಗ ಪಂಡಿತ ಕುಶಾಲಪ್ಪ ಗೌಡ ತರಬೇತಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು.