ಎಸ್‌ಸಿ/ಎಸ್‌ಟಿಯವರಿಗೆ ಸ್ವಂತ ಮನೆ ಕಟ್ಟಲು ಅರ್ಜಿ ಆಹ್ವಾನ
Update: 2017-06-27 20:02 IST
ಮಂಗಳೂರು, ಜೂ.27: ಬಡತನ ರೇಖೆಗಿಂತ ಕೆಳಗಿರುವ ವಸತಿ ರಹಿತರಿಗೆ ವಸತಿ ಸೌಕರ್ಯ ಕಲ್ಪಿಸುವ ಯೋಜನೆಯು ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಸರಕಾರವು ಆಯವ್ಯಯದಲ್ಲಿ ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮದ ಮೂಲಕ ಅನುಷ್ಠಾನವಾಗುತ್ತಿರುವ ವಸತಿ ಯೋಜನೆಗಳಡಿ ಪ್ರತಿ ವರ್ಷ 3 ಲಕ್ಷದಂತೆ, ಒಟ್ಟು 15 ಲಕ್ಷ ಮನೆಗಳನ್ನು ನಿರ್ಮಿಸುವ ಗುರಿ ಹೊಂದಲಾಗಿದೆ.
ಕಳೆದ 4 ವರ್ಷಗಳಲ್ಲಿ 11 ಲಕ್ಷ ಮನೆಗಳನ್ನು ನಿರ್ಮಿಸಲಾಗಿದೆ. ಪ್ರಸಕ್ತ 2017-18 ಸಾಲಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಯೋಜನೆಯಲ್ಲಿ ದ.ಕ ಜಿಲ್ಲೆಯ ನಗರ / ಪಟ್ಟಣ ಪ್ರದೇಶಗಳಲ್ಲಿ 617 ಮಂದಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸ್ವಂತ ನಿವೇಶನ ಹೊಂದಿರುವ ಫಲಾನುಭವಿಗಳಿಗೆ ಮನೆ ಕಟ್ಟಲು ಅವಕಾಶ ಕಲ್ಪಿಸಲಾಗಿದೆ.
ಆಸಕ್ತರು ಕೂಡಲೇ ತಮ್ಮ ಪ್ರದೇಶಗಳಿಗೆ ಸಂಬಂಧಿಸಿದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅರ್ಜಿಯನ್ನು ಸಲ್ಲಿಸಲು ಯೋಜನಾ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ಧಿ ಕೋಶ, ದ.ಕ ಜಿಲ್ಲೆ ಇವರ ಪ್ರಕಟನೆ ತಿಳಿಸಿದೆ.