ಮೆಲ್ಕಾರ್ ಮಹಿಳಾ ಪದವಿ ಕಾಲೇಜಿಗೆ ಶೇ. 100 ಫಲಿತಾಂಶ
Update: 2017-06-27 21:48 IST
ಮಂಗಳೂರು, ಜೂ. 27: ಮೆಲ್ಕಾರ್ ಮಹಿಳಾ ಪದವಿ ಕಾಲೇಜು ಶೇ. 100 ಫಲಿತಾಂಶ ಪಡೆದಿದೆ.
ಬಿ.ಕಾಂ ಅಂತಿಮ ಪದವಿ ಪರೀಕ್ಷೆಯಲ್ಲಿ ಹಾಜರಾದ 31 ವಿದ್ಯಾರ್ಥಿಗಳಲ್ಲಿ 18 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ 11 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 2 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ.
ಬಿ.ಎ ಅಂತಿಮ ಪದವಿ ಪರೀಕ್ಷೆಯಲ್ಲಿ ಹಾಜರಾದ 40 ವಿದ್ಯಾರ್ಥಿಗಳಲ್ಲಿ 9 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 26 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 5 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ ಎಂದು ಮೆಲ್ಕಾರ್ ಪಿ.ಯು. ಮತ್ತು ಪದವಿ ಮಹಿಳಾ ಕಾಲೇಜಿನ ಸ್ಥಾಪಕಾಧ್ಯಕ್ಷ ಎಸ್.ಎಮ್. ರಶೀದ್ ಹಾಜಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.