ನಾಳೆಯಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ; ನಿಷೇಧಾಜ್ಞೆ

Update: 2017-06-27 16:36 GMT

ಉಡುಪಿ, ಜೂ.27: ಜಿಲ್ಲೆಯಲ್ಲಿ ಜೂ.28ರಿಂದ ಜು.8ರವರೆಗೆ 2017ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ಜಿಲ್ಲೆಯ 4 ಪರೀಕ್ಷಾ ಕೇಂದ್ರ ಗಳಲ್ಲಿ ನಡೆಯಲಿದೆ. ಈ ಪರೀಕ್ಷಾ ಕೇಂದ್ರಗಳ ಸುತ್ತಲೂ ಇರುವ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಹಾಗೂ 200 ಮೀ. ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರು ಸೆಕ್ಷನ್ 144ರಂತೆ ನಿಷೇದಾಜ್ಞೆ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News