ಮೂಡುಬಿದಿರೆ: ಬಾಬು ರಾಜೇಂದ್ರ ಪ್ರೌಢಶಾಲೆಯಲ್ಲಿ ಸ್ಥಾಪಕರ ದಿನಾಚರಣೆ
ಮೂಡುಬಿದಿರೆ, ಜೂ.29: ಬಾಬು ರಾಜೇಂದ್ರ ಪ್ರಸಾದ್ ಪ್ರೌಢಶಾಲೆಯಲ್ಲಿ ಸ್ಥಾಪಕರ ದಿನಾಚರಣೆ ನಡೆಯಿತು. ಮಂಗಳೂರಿನ ಉದ್ಯಮಿ, ಶಾಲೆಯ ಹಳೆ ವಿದ್ಯಾರ್ಥಿ ಸಂಜಯ ಭಟ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಕಳೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 606 ಅಂಕಗಳನ್ನು ಪಡೆದು ಶಾಲೆಯಲ್ಲಿ ಅಂಕಗಳಿಕೆಯಲ್ಲಿ ಅಗ್ರಸ್ಥಾನಿಯಾದ ವಿದ್ಯಾರ್ಥಿ ಸ್ವಸ್ತಿಕ್ ಅವರನ್ನು ಸನ್ಮಾನಿಸಿದರು.
ಬಾಲ ಕಾರ್ಮಿಕ ವಿರೋಧಿ ದಿನಾಚರಣೆಯ ಪ್ರಯುಕ್ತ ಚಂದ್ರಕಲಾ ಅವರು ಮಾಹಿತಿಯೊಂದಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಶಾಲಾ ಆಡಳಿತ ಮಂಡಳಿ ಉಪಾಧ್ಯಕ್ಷ ಎಸ್.ಡಿ.ಸಂಪತ್ ಸಾಮ್ರಾಜ್ಯ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಆಡಳಿತ ಮಂಡಳಿ ಸದಸ್ಯರಾದ ನಾರಾಯಣ ಪಿ, ಬಾಹುಬಲಿ ಎಂ, ಅಬುಲಾಲ, ರವೀಂದ್ರ ಪೈ, ವೆಂಕಟೇಶ್ ಕಾಮತ್, ಸತೀಶ್ ಕಾಮತ್, ರಾಮಪ್ರಸಾದ್ ಭಟ್, ಪುಷ್ಪರಾಜ್, ನಿವೃತ್ತ ಕಛೇರಿ ಸಹಾಯಕ ದಾಮೋದರ ಆಚಾರ್ ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯಿನಿ ಪದ್ಮಜಾ ಸ್ವಾಗತಿಸಿದರು. ಶಿಕ್ಷಕ ಜನಾರ್ಧನ ನಾಯ್ಕ ವಂದಿಸಿದರು. ಶಿಕ್ಷಕ ವೆಂಕಟರಮಣ ಕೆರೆದ್ದೆ ಕಾರ್ಯಕ್ರಮ ನಿರೂಪಿಸಿದರು.