ಪ್ರಧಾನಿ ಮಂತ್ರಿ ಉಜ್ವಲ ಯೋಜನೆ: ಸಂಸದರಿಂದ ಕಿಟ್ ವಿತರಣೆ
ಮೂಡುಬಿದಿರೆ, ಜೂ.29: ಪ್ರಧಾನಿ ಮಂತ್ರಿ ಉಜ್ವಲ ಯೋಜನೆಯನ್ನು ಸುಜಾತ ಹೊಸಂಗಡಿ ಅವರಿಗೆ ಉಜ್ವಲ ಯೋಜನೆಯ ಕಿಟ್ ನೀಡುವುದರ ಮೂಲಕ ಸಂಸದ ನಳಿನ್ ಕುಮಾರ್ ಕಟೀಲ್ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ 20 ಕುಟುಂಬಗಳಿಗೆ ಸಾಂಕೇತಿಕವಾಗಿ ಉಜ್ವಲ್ ಕಿಟ್ ವಿತರಿಸಲಾಯಿತು. ಉಳಿದ 453 ಕುಟುಂಬದ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಅವರಿಗೆ ಏಜೆನ್ಸಿ ಮುಖಾಂತರ ಗ್ಯಾಸ್ ಸಂಪರ್ಕ ಕಲ್ಪಿಸುವ ಕುರಿತು ಮಾಹಿತಿ ನೀಡಲಾಯಿತು.
ದ.ಕ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೂಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಸದಸ್ಯ ಕೆ.ಪಿ ಸುಚರಿತ ಶೆಟ್ಟಿ, ಮೂಡುಬಿದಿರೆ ಪುರಸಭಾ ಸದಸ್ಯರಾದ ಬಾಹುಬಲಿ ಪ್ರಸಾದ್, ಲಕ್ಷ್ಮಣ್ ಪೂಜಾರಿ, ಪ್ರಸಾದ್, ನಾಗರಾಜ ಪೂಜಾರಿ,ಉಜ್ವಲ ಯೋಜನೆಯ ನೋಡೆಲ್ ಅಧಿಕಾರಿ ನವೀನ್ ಕೆ.ಆರ್, ಎಚ್‌ಪಿ ಗ್ಯಾಸ್ ಏಜೆನ್ಸಿಯ ಪ್ರಾದೇಶಿಕ ಮೆನೇಜರ್ ಎನ್.ರಮೇಶ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕೆ.ಪಿ ಜಗದೀಶ್ ಅಧಿಕಾರಿ, ಪ್ರಧಾನ ಕಾರ್ಯದರ್ಶಿ ಉಮಾನಾಥ ಕೋಟ್ಯಾನ್, ಮೂಡುಬಿದಿರೆ ಮಂಡಲ ಬಿಜೆಪಿ ಅಧ್ಯಕ್ಷ ಈಶ್ವರ ಕಟೀಲ್, ಪದ್ಮಶ್ರೀ ಗ್ಯಾಸ್ ಏಜೆನ್ಸಿಯ ಅಭಿಜಿತ್ ಎಂ.ಉಪಸ್ಥಿತರಿದ್ದರು. ಬೆಳುವಾಯಿ ಭಾಸ್ಕರ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.