ಗದಗ: ದುಷ್ಕರ್ಮಿಗಳಿಂದ ಮಲಗಿದ್ದ ವ್ಯಕ್ತಿಯ ಕೊಲೆ
Update: 2017-06-29 18:13 IST
ಗದಗ, ಜೂ. 29: ತಲೆಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯೋರ್ವನನ್ನ ಭರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗದಗ ಬೆಟಗೇರಿಯ ಶರಣ ಬಸವೇಶ್ವರ ನಗರದಲ್ಲಿ ನಡೆದಿದೆ.
ಗದಗ ತಾಲೂಕಿನ ಹರ್ತಿ ಗ್ರಾಮದ ಆನಂದ ಭಜಂತ್ರಿ (45) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.
ಎರಡು ದಿನಗಳ ಹಿಂದೆ ತನ್ನ ತಂಗಿಯ ಬೆಟಗೇರಿ ಮನೆಗೆ ಬಂದಿದ್ದರು ಎನ್ನಲಾಗಿದ್ದು, ರಾತ್ರಿ ಊಟ ಮುಗಿಸಿ ಮನೆ ಹತ್ತಿರದ ಖಾಲಿ ಇರುವ ಕಾಂಪ್ಲೆಕ್ಸ್‌ನ ಮುಂಭಾಗದಲ್ಲಿ ಮಲಗಿದ್ದಾರು ಎಂದು ತಿಳಿದುಬಂದಿದ್ದು, ತಡರಾತ್ರಿ ದುಷ್ಕರ್ಮಿಗಳು ಮಲಗಿದ್ದ ಅವರ ತಲೆಗೆ, ಮುಖದ ಭಾಗಕ್ಕೆ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ದುಷ್ಕರ್ಮಿಗಳ ಈ ಕೃತ್ಯಕ್ಕೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ.
ಸ್ಥಳಕ್ಕೆ ಬೆಟಗೇರಿ ಪೊಲೀಸರು, ಶ್ವಾನದಳ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಈ ಬಗ್ಗೆ ಬೆಟಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.