ಜಲಾನಯನ ಅಭಿವೃದ್ಧಿ ಇಲಾಖೆಗೆ ಪ್ರತಿಷ್ಠಿತ ಸ್ಕೋಚ್ ರಾಷ್ಟ್ರೀಯ ಪ್ರಶಸ್ತಿ

Update: 2017-06-29 13:59 GMT

ಬೆಂಗಳೂರು, ಜೂ.29: ಜಲಾನಯನ ಅಭಿವೃದ್ಧಿ ಇಲಾಖೆಯು ವಿಶ್ವಬ್ಯಾಂಕ್ ನೆರವಿನೊಂದಿಗೆ ಕರ್ನಾಟಕ ಜಲಾನಯನ ಅಭಿವೃದ್ಧಿ ಯೋಜನೆ-2 (ಸುಜಲ-3)ನ್ನು, ರಾಜ್ಯದ 11 ಜಿಲ್ಲೆಗಳಲ್ಲಿ 2013 ರಿಂದ ಅನುಷ್ಠಾನಗೊಳಿಸುತ್ತಿದೆ. ಈ ಯೋಜನೆಯಲ್ಲಿ ಅತ್ಯಾಧುನಿಕ ಹಾಗೂ ವೈಜ್ಞಾನಿಕ ಸಿದ್ಧಾಂತಗಳನ್ನು ಅಳವಡಿಸಿ ಜಲಾನಯನ ಅಭಿವೃದ್ಧಿ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುವ ತಂತ್ರಗಳನ್ನು ಬಳಕೆ ಮಾಡಿರುವುದನ್ನು ಪರಿಗಣಿಸಿ, ಮುಂಬೈನ ಪ್ರತಿಷ್ಠಿತ ಸ್ಕೋಚ್ ಆರ್ಡರ್- ಆಫ್-ಮೆರಿಟ್ ಎಂಬ ರಾಷ್ಟ್ರೀಯ ಪ್ರಶಸ್ತಿಯನ್ನು, ಕರ್ನಾಟಕ ರಾಜ್ಯ ಜಲಾನಯನ ಅಭಿವೃದ್ಧಿ ಇಲಾಖೆಯು ಪಡೆದುಕೊಂಡಿದೆ.

ಈ ಪ್ರಶಸ್ತಿಯನ್ನು ಮುಂಬೈನಲ್ಲಿರುವ ಷೇರು ವಿನಿಮಯ (ಬಾಂಬೆ ಸ್ಟಾಕ್ ಎಕ್ಸಚೇಂಜ್) ಅಂತಾರಾಷ್ಟ್ರೀಯ ಸಮಾವೇಶ ಕೇಂದ್ರದಲ್ಲಿ ಸ್ಕೋಚ್ ಸಂಸ್ಥೆಯ ಅಧ್ಯಕ್ಷರಾದ ಸಮೀರ್ ಕೊಚ್ಚರ್, ಜಲಾನಯನ ಅಭಿವೃದ್ಧಿ ಇಲಾಖೆಯ ಆಯುಕ್ತ ರಾಜೀವ್ ರಂಜನ್ ಹಾಗೂ ಸುಜಲ-3 ಯೋಜನೆಯ ಕಾರ್ಯಕಾರಿ ನಿರ್ದೇಶಕ ಡಾ.ಸೂರ್ಯದೇವ್ ಪಾಠಕ್ ಅವರಿಗೆ ಇತ್ತಿಚೆಗೆ ಪ್ರದಾನ ಮಾಡಿದರು ಎಂದು ಜಲಾನಯನ ಅಭಿವೃದ್ಧಿ ಇಲಾಖೆಯ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News