ಸಿ.ಪಿ. ಜಯರಾಮ ಗೌಡರ ಅಂತ್ಯಕ್ರಿಯೆ
ಕಾಣಿಯೂರು, ಜೂ.29: ಬೆಂಗಳೂರಿನ ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾದ ಸಹಕಾರಿ ಧುರೀಣ, ಹಿರಿಯ ಕಾಂಗ್ರೆಸ್ ಮುಖಂಡ ಸಿ.ಪಿ. ಜಯರಾಮ ಗೌಡ ಅವರ ಅಂತ್ಯಕ್ರಿಯೆ ಗುರುವಾರ ಸ್ವಗ್ರಾಮ ಪುತ್ತೂರು ತಾಲೂಕಿನ ಚಾರ್ವಾಕದಲ್ಲಿ ನಡೆಯಿತು.
ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಧರ್ಮಪಾಲನಾಥ ಸ್ವಾಮೀಜಿ, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ, ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಯು.ಟಿ. ಖಾದರ್, ಶಾಸಕರಾದ ಶಕುಂತಳಾ ಟಿ. ಶೆಟ್ಟಿ, ವಿನಯ ಕುಮಾರ್ ಸೊರಕೆ, ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜೀವ ಮಠಂದೂರು, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಪ್ಪ ಗೌಡ ಮಾಚಿಲ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಫಝುಲ್ ರಹೀಂ, ಮಾಜಿ ಅಧ್ಯಕ್ಷ ಹೇಮನಾಥ ಶೆಟ್ಟಿ, ಜೆಡಿಎಸ್ ಜಿಲ್ಲಾ ಉಪಾಧ್ಯಕ್ಷ ಪ್ರವೀಣ್ ಮುಂಡೋಡಿ, ಜಿಪಂ ಸದಸ್ಯರಾದ ಪಿ.ಪಿ. ವರ್ಗೀಸ್, ಆಶಾ ತಿಮ್ಮಪ್ಪ ಗೌಡ, ಸರ್ವೋತ್ತಮ ಗೌಡ, ಪ್ರಮೀಳಾ ಜನಾರ್ಧನ, ಕೆಪಿಸಿಸಿ ಸದಸ್ಯ ಡಾ. ಬಿ. ರಘು, ಬಿಜೆಪಿ ಮುಖಂಡ ಚನಿಲ ತಿಮ್ಮಪ್ಪ ಶೆಟ್ಟಿ, ಪುತ್ತೂರು ಎಪಿಎಂಸಿ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಎಪಿಎಂಸಿ ನಿರ್ದೇಶಕ ದಿನೇಶ್ ಮೆದು, ಕರ್ನಾಟಕ ಅರೆ ಭಾಷೆ ಅಕಾಡೆಮಿ ಮಾಜಿ ಅಧ್ಯಕ್ಷ ದೇವಿಪ್ರಸಾದ್ ಸಂಪಾಜೆ, ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯ ವಿಜಯ ಕುಮಾರ್ ಸೊರಕೆ, ಜಿಲ್ಲಾ ಕೆಡಿಪಿ ಸದಸ್ಯ ಸತೀಶ್ ಕುಮಾರ್ ಕೆಡೆಂಜಿ, ಸುಳ್ಯ ವಿಧಾನಸಭಾ ಕ್ಷೇತ್ರ ಅಕ್ರಮ ಸಕ್ರಮ ಸಮಿತಿ ಸದಸ್ಯ ಪ್ರವೀಣ್ ಕುಮಾರ್ ಕೆಡೆಂಜಿಗುತ್ತು, ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಕರ್ನಾಟಕ ಗೇರು ನಿಗಮದ ಮಾಜಿ ಅಧ್ಯಕ್ಷ ಲಕ್ಷಣ ಗೌಡ ಕುಂಡಿಕಾನ, ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಗೌಡ, ಬೆಳ್ಳಾರೆ ಜ್ಞಾನಗಂಗಾ ಸ್ಕೂಲ್ ಸಂಚಾಲಕ ಉಮೇಶ್ ಎಂ.ಪಿ., ಕೆವಿಜಿಯ ಜ್ಯೋತಿ ರೇಣುಕಾ ಪ್ರಸಾದ್, ಕುಕ್ಕೇ ಶ್ರೀ ಸುಬ್ರಹಣ್ಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯೆ ರಾಜೀವಿ ಆರ್.ರೈ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಭರತ್ ಮುಂಡೋಡಿ, ಮಾಜಿ ಸದಸ್ಯೆ ಪುಷ್ಪಾವತಿ ಕಳುವಾಜೆ, ಪುತ್ತೂರು ತಾಲೂಕು ಗೌಡ ಸೇವಾ ಸಂಘದ ಅಧ್ಯಕ್ಷ ನಾಗಪ್ಪ ಗೌಡ ಬೊಮ್ಮೆಟ್ಟಿ, ಗೌರವಾಧ್ಯಕ್ಷ ಚಿದಾನಂದ ಬೈಲಾಡಿ, ಯುವ ಗೌಡ ಸೇವಾ ಸಂಘದ ಗೌರವಾಧ್ಯಕ್ಷ ಪ್ರವೀಣ್ ಕುಂಟ್ಯಾನ, ಒಕ್ಕಲಿಗ ಸೇವಾ ಟ್ರಸ್ಟ್‌ನ ಅಧ್ಯಕ್ಷ ಎ.ವಿ. ನಾರಾಯಣ, ತಾಪಂ ಸದಸ್ಯರಾದ ಅಶೋಕ್ ನೆಕ್ರಾಜೆ, ಗಣೇಶ್ ಕೈಕುರೆ, ಫಝಲ್ ಕೋಡಿಂಬಾಳ, ಕಡಬ ಬ್ಲಾಕ್ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಕೆ.ಪಿ. ಥೋಮಸ್ ಸೇರಿದಂತೆ ಅನೇಕ ಮಂದಿ ನೆಂಟರಿಷ್ಟರು, ರಾಜಕೀಯ ಪಕ್ಷಗಳ ಮುಖಂಡರು ಭಾಗವಹಿಸಿದರು.
ಸಿ.ಪಿ. ಜಯರಾಮ ಗೌಡರ ಪುತ್ರಿ ವಚನಾ, ಸಹೋದರನ ಮಕ್ಕಳಾದ ಎ.ಪಿ. ಮೋಹನ್, ಪ್ರಕಾಸ್ ಅಂತಿಮ ವಿಧಿ ವಿಧಾನ ನಡೆಸಿದರು.