×
Ad

ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಉದ್ಘಾಟನೆ

Update: 2017-06-29 20:52 IST

ಉಡುಪಿ, ಜೂ.29: ಉಡುಪಿ ಜಿಲ್ಲೆಯಲ್ಲೇ ಪ್ರಥಮದ್ದಾದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯವನ್ನು ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಇಂದು ಚಾಲನೆ ನೀಡಿದರು.

ಅತ್ಯಂತ ಸುಸಜ್ಜಿತವಾಗಿ ಮೂಲಭೂತ ಸೌಕರ್ಯಗಳೊಂದಿಗೆ 12,500 ಚದರ ಅಡಿ ವ್ಯಾಪ್ತಿಯಲ್ಲಿ 2.35 ಕೋಟಿ ರೂ ವೆಚ್ಚದಲ್ಲಿ ನಿರ್ಮಿತಿ ಸಂಸ್ಥೆಯಿಂದ ನಿರ್ಮಾಣಗೊಂಡ ವಿದ್ಯಾರ್ಥಿನಿಲಯ ಮಣಿಪಾಲದ ಹೃದಯ ಭಾಗದಲ್ಲಿದ್ದು, ವಿದ್ಯಾರ್ಥಿನಿಯರಿಗೆ ವರದಾನವಾಗಿದೆ ಎಂದು ಸಚಿವರು ಅಭಿಪ್ರಾಯಪಟ್ಟರು.

ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಎ.ಗಪೂರ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಹರೀಶ್ ಗಾಂವಕರ್, ನಿರ್ಮಿತಿ ಕೇಂದ್ರದ ಅರುಣ್ ಮುಂತಾದವರು ಉಪಸ್ಥಿತರಿದ್ದರು.
    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News