ಮಕ್ಕಳ ಕಾನೂನು ಬಾಹಿರ ಚಟುವಟಿಕೆ ತಡೆ ಎಲ್ಲರ ಜವಾಬ್ದಾರಿ: ಸಚಿವ ಪ್ರಮೋದ್ ಮಧ್ವರಾಜ್
ಉಡುಪಿ, ಜೂ.29: ಮಕ್ಕಳು ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗದಂತೆ ತಡೆಯುವುದು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ವೆಂಕಟೇಶ್ ನಾಯ್ಕಾ ಟಿ. ಮಾತನಾಡಿ, ವಿಶ್ವದ ಜನಸಂಖ್ಯೆಯಲ್ಲಿ ಹೆಚ್ಚಿನ ಭಾಗ ಮಕ್ಕಳಿದ್ದು, ಮಕ್ಕಳನ್ನು ಉತ್ತಮ ನಾಗರೀಕರನ್ನಾಗಿ ಮಾಡುವುದು ಎಲ್ಲರ ಕರ್ತವ್ಯ. ಇಲ್ಲವಾದಲ್ಲಿ ಮಕ್ಕಳು ಸಮಾಜಕ್ಕೆ ಕಂಟಕಪ್ರಾಯರಾಗುತ್ತಾರೆ. ಕಾನೂನು ಸಂಘರ್ಷಕ್ಕೆ ಒಳಗಾದ ಮಕ್ಕಳನ್ನು ಬಾಲ ನ್ಯಾಯ ಮಂಡಳಿಯ ಮೂಲಕವೇ ವಿಚಾರಣೆ ನಡೆಸಬೇಕು. ಸಂವಿಧಾನ ಮಕ್ಕಳಿಗೆ ನೀಡಿರುವ ಎಲ್ಲಾ ಹಕ್ಕುಗಳನ್ನು ಒದಗಿಸಬೇಕು. ಮಕ್ಕಳ ಹಕ್ಕುಗಳಿಗೆ ತೊಂದರೆಯಾದಲ್ಲಿ ಉಚಿತ ಕಾನೂನಿನ ನೆರವು ನೀಡಬೇಕು ಎಂದು ತಿಳಿಸಿದರು.
ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ಸದಸ್ಯರಾದ ಗೀತಾಂಜಲಿ ಸುವರ್ಣ, ಶಿಲ್ಪಾಸುವರ್ಣ, ನಗರಸಭಾ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಲತಾ, ಜಿಲ್ಲಾ ಬಾಲ ನ್ಯಾಯ ಮಂಡಳಿಯ ಅಧ್ಯಕ್ಷ ಮತ್ತು ಹೆಚ್ಚುವರಿ ಮುಖ್ಯ ನ್ಯಾಯಿಕ ದಂಡಾಧಿಕಾರಿ ವಿವೇಕಾನಂದ ಎಸ್.ಪಂಡಿತ್, ಉಡುಪಿ ತಹಶೀಲ್ದಾರ್ ಮಹೇಶ್ಚಂದ್ರ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಹರೀಶ್ ಗಾಂವಕರ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಉಪಸ್ಥಿತರಿದ್ದರು.