ಹಿಂದುಳಿದ ವರ್ಗದವರಿಗೆ ಉದ್ಯೋಗ ಸಾಲ ಸೌಲಭ್ಯ

Update: 2017-06-30 13:31 GMT

ಚಿಕ್ಕಮಗಳೂರು ಜೂ.30: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2017-18ನೇ ಸಾಲಿನಲ್ಲಿ ಜಿಲ್ಲೆಯ ಹಿಂದುಳಿದ ವರ್ಗಗಳ ಜನರ ಆರ್ಥಿಕ ಅಭಿವೃದ್ಧಿ ಮತ್ತು ಸ್ವಯಂ ಉದ್ಯೋಗಕ್ಕಾಗಿ ವಿವಿಧ ಸಾಲ ಸೌಲಭ್ಯ ಪಡೆಯಲು ಅರ್ಹ ಹಿಂದುಳಿದ ವರ್ಗದ ಜನರಿಂದ ಅರ್ಜಿ ಆಹ್ವಾನಿಸಲಾಗಿದೆ.

    ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸಾಲ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ನಿರುದ್ಯೋಗಿ ಯುವಕರಿಗೆ ಟೂರಿಸ್ಟ್ ಟ್ಯಾಕ್ಸಿ/ಸರಕು ಸಾಗಾಣಿಕೆ ವಾಹನ ಕೊಳ್ಳಲು ಸಹಾಯ ಧನ, ಗಂಗಾ ಕಲ್ಯಾಣ ವೈಯಕ್ತಿಕ ನೀರಾವರಿ ಯೋಜನೆ ಹಾಗೂ ವೃತ್ತಿ ತರಬೇತಿ ಯೋಜನೆ ಸೌಲಭ್ಯಗಳಡಿ ಯೋಜನೆಗಳ ಪ್ರಯೋಜನ ಪಡೆಯಲು ಅರ್ಜಿ ಸಲ್ಲಿಸಬಹುದು.

ನಿಗದಿತ ಅರ್ಜಿ ನಮೂನೆಗಳನ್ನು ನಿಗಮದ ಜಿಲ್ಲಾ ವ್ಯವಸ್ಥಾಪಕರ ಮತ್ತು ಆಯಾ ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ವಿಸ್ತರಣಾಧಿಕಾರಿಗಳ ಕಛೇರಿ ಹಾಗೂ   www.karnataka.gov.in/dbcdc ವೆಬ್‌ಸೈಟಿನಿಂದ 2017ರ ಜು.15 ರೊಳಗೆ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ ನಿಯಮಿತ, ಜಿಲ್ಲಾ ಪಂಚಾಯಿತಿ ಹಿಂಭಾಗ, ರೇಷ್ಮೆ ಇಲಾಖೆ ಕಟ್ಟಡ, ಜ್ಯೋತಿ ನಗರ, ಚಿಕ್ಕಮಗಳೂರು ಇಲ್ಲಿಗೆ ಅಗತ್ಯ ದಾಖಲಾತಿಗಳೊಂದಿಗೆ 2017ರ ಜು.31 ರೊಳಗೆ ಸಲ್ಲಿಸುವುದು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News