ಕೆ.ಸಿ.ವೇಣುಗೋಪಾಲ್ ವಿರುದ್ಧದ ಅನಗತ್ಯ ಆರೋಪ ಸಹಿಸುವುದಿಲ್ಲ: ದಿನೇಶ್ ಗುಂಡೂರಾವ್

Update: 2017-06-30 15:00 GMT

ಬೆಂಗಳೂರು, ಜೂ. 30: ವಿಶ್ವ ವಿದ್ಯಾಲಯಗಳಲ್ಲಿ ಕೋಮುವಾದದ ವಿಷ ಬೀಜ ಬಿತ್ತಿ ವಿದ್ಯಾರ್ಥಿಗಳನ್ನು ಹಾಳು ಮಾಡುತ್ತಿರುವವರು ಬಿಜೆಪಿಯವರು ಎಂದು ಆರೋಪಿಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಚಿವ ಸುರೇಶ್ ಕುಮಾರ್ ಎಐಸಿಸಿ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ವಿರುದ್ಧ ಅನಗತ್ಯ ಆರೋಪ ಮಾಡುವುದನ್ನು ಸಹಿಸುವುದಿಲ್ಲ್ಲ ಎಂದು ಎಚ್ಚರಿಸಿದ್ದಾರೆ.

ಕಾಂಗ್ರೆಸ್ ಸಂಸ್ಕೃತಿ ಕೊಲೆಗಡುಕ ಸಂಸ್ಕೃತಿಯಲ್ಲ. ಬದಲಿಗೆ ದೇಶ ಕಟ್ಟುವ ಸಂಸ್ಕೃತಿ. ಕೊಲ್ಲು-ಕೊಚ್ಚುವ ಸಂಸ್ಕೃತಿಯೂ ನಮ್ಮದಲ್ಲ. ಪಕ್ಷದ ಮುಂಚೂಣಿ ಘಟಕಗಳ ಸಭೆಯಲ್ಲಿ ಪ್ರಚೋದನೆ ನೀಡುವ ಹೇಳಿಕೆ ನೀಡಿಲ್ಲ. ಆದರೂ, ಅನಗತ್ಯ ಆರೋಪ ಸರಿಯಲ್ಲ ಎಂದು ದಿನೇಶ್ ಗುಂಡೂರಾವ್ ಆಕ್ಷೇಪಿಸಿದ್ದಾರೆ.
ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ದ್ವೇಷ ಕೆರಳಿಸುವ ಕೆಲಸವನ್ನು ಸಂಘ ಪರಿವಾರದ ಅಂಗ ಸಂಸ್ಥೆಗಳು ಮಾಡುತ್ತಿವೆ. ವಿದ್ಯಾರ್ಥಿಗಳು ಮುಕ್ತವಾಗಿ ಓಡಾಡದಂತೆ ಆತಂಕದ ವಾತಾವರಣ ಸೃಷ್ಟಿ ಮಾಡುತ್ತಿದ್ದಾರೆ. ಕೋಮುಭಾವನೆ ಕೆರಳಿಸುವುದೇ ಬಿಜೆಪಿಯವರ ಯೋಜಿತ ಕಾರ್ಯಕ್ರಮವಾಗಿದೆ ಎಂದು ದಿನೇಶ್ ಟೀಕಿಸಿದ್ದಾರೆ.


ಬಿಜೆಪಿಯವರು ವಿದ್ಯಾರ್ಥಿಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಇಂತಹವರಿಂದ ಪಾಠ ಕಲಿಯಬೇಕಾದ ಅವಶ್ಯಕತೆ ಕಾಂಗ್ರೆಸ್ ನಾಯಕರಿಗೆ ಬಂದಿಲ್ಲ ಎಂದು ದಿನೇಶ್ ಗುಂಡೂರಾವ್, ಸುರೇಶ್ ಕುಮಾರ್ ಹೇಳಿಕೆಗೆ ಪ್ರಕಟಣೆಯಲ್ಲಿ ತಿರುಗೇಟು ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News