×
Ad

ಸಿದ್ದಕಟ್ಟೆ ಸರಕಾರಿ ಪ.ಪೂ ಕಾಲೇಜಿನಲ್ಲಿ ಶೌಚಾಲಯ ಉದ್ಘಾಟನೆ

Update: 2017-06-30 22:10 IST

ಬಂಟ್ವಾಳ, ಜೂ. 30: ತಾಲೂಕಿನ ಸಂಗಬೆಟ್ಟು ಜಿಲ್ಲಾ ಪಂಚಾಯತ್ ವ್ಯಾಪ್ತಿಯ 16 ಗ್ರಾಮಗಳಿಗೆ ಕುಡಿಯುವ ನೀರು ಪೂರೈಸಲು 36 ಕೋಟಿ ರೂಪಾಯಿ ವೆಚ್ಚದಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಈಗಾಗಲೇ ಅನುಷ್ಠಾನಗೊಂಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು.

ಬಂಟ್ವಾಳ ತಾಲೂಕು ಸಿದ್ದಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಮಂಗಳೂರು ವಿಶೇಷ ಆರ್ಥಿಕ ವಲಯದ ವತಿಯಿಂದ ಸುಮಾರು 6 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಬಾಲಕಿಯರ ಶೌಚಾಲಯವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು. ಸಂಗಬೆಟ್ಟು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಅನುಷ್ಠಾನಗೊಳಿಸುವ ಜೊತೆಗೆ ಈ ಪ್ರದೇಶದಲ್ಲಿ ರೈತರಿಗೆ ಕೃಷಿ ಚಟುವಟಿಕೆ ನಡೆಸಲು ಅನುಕೂಲವಾಗುವಂತೆ ಅಂತರ್ಜಲ ವೃದ್ಧಿಸುವ ನಿಟ್ಟಿನಲ್ಲಿ ಪಶ್ಚಿಮವಾಹಿನಿ ಯೋಜನೆಯಲ್ಲಿ ಇಲ್ಲಿನ ಪುಚ್ಚಮೊಗರು ಫಲ್ಗುಣಿ ಹೊಳೆಗೆ 4 ಕೋಟಿ ರೂಪಾಯಿ ವೆಚ್ಚದ ಹೊಸ ಕಿಂಡಿ ಅಣೆಕಟ್ಟೆ ನಿರ್ಮಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಅವರು ಹೇಳಿದರು.

ಕಂಪೆನಿಗಳು ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ನಿಧಿ ವಿನಿಯೋಗಿಸುವುದರಿಂದ ಪರಿಸರ ಸಂಬಂಧಿತ ಅಭಿವೃದ್ಧಿ ಕಾರ್ಯಗಳು ನಡೆಸಲು ಸಹಕಾರಿಯಾಗಿದೆ. ಕಾಲೇಜಿಗೆ ಆವರಣ ತಡೆಗೋಡೆ ಮೊದಲಾದ ಅಗತ್ಯ ಕಾಮಗಾರಿಗಳಿಗೆ ಅನುದಾನ ಒದಗಿಸುವುದಾಗಿ ಅವರು ಭರವಸೆ ನೀಡಿದರು.

ಮಂಗಳೂರು ವಿಶೇಷ ಆರ್ಥಿಕ ವಲಯ (ಎಂಎಸ್‌ಇಝಡ್) ಮಹಾ ಪ್ರಬಂಧಕ ಈಟ ಶ್ರೀನಿವಾಸುಲು, ಸಿದ್ದಕಟ್ಟೆ ಸ.ಪ್ರ.ದ.ಕಾಲೇಜು ಪ್ರಾಂಶುಪಾಲ ಪ್ರೊ. ಸತ್ಯನಾರಾಯಣ ಭಟ್, ಸ.ಪ.ಪೂ. ಕಾಲೇಜು ನಿವೃತ್ತ ಪ್ರಾಂಶುಪಾಲ ಎನ್.ಪದ್ಮನಾಭ ರೈ, ತಾಪಂ ಸದಸ್ಯ ಪ್ರಭಾಕರ ಪ್ರಭು, ಕುಕ್ಕಿಪಾಡಿ ಗ್ರಾಪಂ ಅಧ್ಯಕ್ಷ ದಿನೇಶ್ ಸುಂದರ ಶಾಂತಿ, ಸ.ಪ್ರೌ. ಶಾಲಾ ಉಪ ಪ್ರಾಂಶುಪಾಲ ರಮಾನಂದ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸೀತಾರಾಮ ಶಾಂತಿ ಮತ್ತಿತರರು ಉಪಸ್ಥಿತರಿದ್ದರು.

 ಸ.ಪ.ಪೂ. ಕಾಲೇಜು ಪ್ರಭಾರ ಪ್ರಾಂಶುಪಾಲ ಶ್ರೀನಿವಾಸ ನಾಯ್ಕ ಸ್ವಾಗತಿಸಿ, ಪ್ರಸ್ತಾವಿಸಿದರು. ಉಪನ್ಯಾಸಕಿ ಶಾರದಾ ವಂದಿಸಿದರು. ಉಪನ್ಯಾಸಕ ಸಂಜಯ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News