ರಾಘವೇಶ್ವರ ಶ್ರೀ ಅತ್ಯಾಚಾರ ಪ್ರಕರಣ: 7ನೆ ನ್ಯಾಯಾಧೀಶರೂ ವಿಚಾರಣೆಯಿಂದ ಹಿಂದಕ್ಕೆ

Update: 2017-06-30 17:22 GMT

ಬೆಂಗಳೂರು, ಜೂ.30: ರಾಮಚಂದ್ರಾಪುರ ಮಠದ ಪೀಠಾಧಿಪತಿ ಶ್ರೀರಾಘವೇಶ್ವರ ಭಾರತಿ ಶ್ರೀಗಳನ್ನು ಪೀಠದಿಂದ ಕೆಳಗಿಳಿಸಬೇಕು ಎಂಬ ಪಿಐಎಲ್ ವಿಚಾರಣೆಯಿಂದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಹಿಂದೆ ಸರಿದಿದ್ದಾರೆ.

       ರಾಘವೇಶ್ವರ ಭಾರತೀ ಶ್ರೀಗಳ ವಿರುದ್ಧ ಅತ್ಯಾಚಾರದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಹಾಗೂ ಮಠದ ಆಡಳಿತದಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳಲು ವಿಫಲವಾಗಿದ್ದಾರೆ ಎಂದು ಆರೋಪಿಸಿ ಶ್ರೀಮಠವನ್ನು ಸರಕಾರ ತನ್ನ ಸುಪರ್ದಿಗೆ ತೆಗೆದುಕೊಳ್ಳಬೇಕು ಹಾಗೂ ಆಡಳಿತಾಧಿಕಾರಿ ನೇಮಿಸಬೇಕೆಂದು ಎದುರ್ಕಳ ಈಶ್ವರ್ ಭಟ್ ಎಂಬುವವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

 ಇದೀಗ ಪ್ರಕರಣದ ವಿಚಾರಣೆಯ ಹಂತದಲ್ಲಿ ಮುಖ್ಯ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿಯುತ್ತಿರುವುದಾಗಿ ಪ್ರಕಟಿಸಿದ್ದಾರೆ. ನನ್ನ ಬಗ್ಗೆ ಪ್ರತಿವಾದಿಗಳಾದ ಮಠದವರು ಪೂರ್ವಗ್ರಹ ಭಾವನೆ ಹೊಂದಿದ್ದಾರೆ. ಹೀಗಾಗಿ ವಿಚಾರಣೆಯಿಂದ ಹಿಂದೆ ಸರಿಯುತ್ತಿರುವುದಾಗಿ ಸಿಜೆ ಎಸ್.ಕೆ.ಮುಖರ್ಜಿಯವರು ಪ್ರಕಟಿಸಿದ್ದಾರೆ. ಎಸ್.ಕೆ.ಮುಖರ್ಜಿಯವರು ರಾಮಚಂದ್ರಾಪುರ ಮಠದ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿಯುತ್ತಿರುವ 7ನೆ ನ್ಯಾಯಾಧೀಶರಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News