ವಿಶ್ವಕಪ್‌ಗೆ ಮೊದಲು ಯುವ ಆಟಗಾರರಿಗೆ ಹೆಚ್ಚಿನ ಅವಕಾಶ: ಪ್ರಸಾದ್
Update: 2017-06-30 23:23 IST
ತಿರುಪತಿ, ಜೂ.30: ಇಂಗ್ಲೆಂಡ್‌ನಲ್ಲಿ 2019ರಲ್ಲಿ ನಡೆಯಲಿರುವ ಐಸಿಸಿ ವಿಶ್ವಕಪ್‌ಗೆ ಮೊದಲು ಯುವ ಆಟಗಾರರಿಗೆ ಹೆಚ್ಚು ಅವಕಾಶ ಕಲ್ಪಿಸಿಕೊಡಲಾಗುವುದು ಎಂದು ಆಯ್ಕೆ ಸಮಿತಿಯ ಅಧ್ಯಕ್ಷ ಎಂಎಸ್‌ಕೆ ಹೇಳಿದ್ದಾರೆ.
ಭಾರತ ವಿಶ್ವಕಪ್ ಆರಂಭವಾಗುವ ಮೊದಲು ಒಟ್ಟು 55 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಲಿದೆ. ಕೆಲವು ಯುವ ಆಟಗಾರರಿಗೆ ವಿಶ್ವಕಪ್‌ಗೆ ಮೊದಲು ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಆಡುವ ಮೂಲಕ ಅನುಭವ ಗಳಿಸಿಕೊಳ್ಳಲು ಅವಕಾಶ ನೀಡಲಾಗುವುದು ಎಂದು ಪ್ರಸಾದ್ ತಿಳಿಸಿದ್ದಾರೆ.
ಐಸಿಸಿ ಚಾಂಪಿಯನ್ ಟ್ರೋಫಿ ಫೈನಲ್‌ನಲ್ಲಿ ಭಾರತ ತಂಡ ಪಾಕಿಸ್ತಾನದ ವಿರುದ್ಧ ಸೋತಿದ್ದಕ್ಕೆ ಪ್ರತಿಕ್ರಿಯೆ ನೀಡಿದ ಪ್ರಸಾದ್, ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ತಂಡ ಫೈನಲ್‌ನಲ್ಲಿ ಸೋತಿದ್ದು ದುರದೃಷ್ಟಕರ. ಫೈನಲ್ ಪಂದ್ಯಕ್ಕೆ ಮೊದಲು ಬ್ಯಾಟಿಂಗ್, ಬೌಲಿಂಗ್ ಹಾಗೂ ಫೀಲ್ಡಿಂಗ್ ವಿಭಾಗದಲ್ಲಿ ಉತ್ತಮ ಪ್ರದರ್ಶನ ನೀಡಿತ್ತು. ಮುಂಬರುವ ವಿಶ್ವಕಪ್‌ನಲ್ಲಿ ಈ ತಪ್ಪನ್ನು ತಿದ್ದಿಕೊಳ್ಳಬೇಕಾಗಿದೆ ಎಂದರು.