ಬಿಳಿನೆಲೆ: ಕಾರು ಢಿಕ್ಕಿಯಾಗಿ ರಸ್ತೆಗುರುಳಿದ ವಿದ್ಯುತ್ ಕಂಬ

Update: 2017-07-01 05:55 GMT

ಕಡಬ, ಜು.1. ಮಾರುತಿ 800 ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಂಬ ರಸ್ತೆಗಡ್ಡವಾಗಿ ಉರುಳಿಬಿದ್ದ ಘಟನೆ ಸುಬ್ರಹ್ಮಣ್ಯ-ಧರ್ಮಸ್ಥಳ ರಾಜ್ಯ ಹೆದ್ದಾರಿಯ ಬಿಳಿನೆಲೆ ಎಂಬಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.
ಅಪಘಾತದ ಬಳಿಕ ಕಾರು ಚರಂಡಿಗೆ ಇಳಿದಿದ್ದು, ಅದರಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News